ಸೋಮವಾರ, ಜೂನ್ 21, 2021
29 °C

Covid-19 Karnataka Updates: ದಾಖಲೆಯ 48,296 ಹೊಸ ಪ್ರಕರಣ, 217 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಕೋವಿಡ್ ಪ್ರಕರಣಗಳ ಸಂಖ್ಯೆ 50 ಸಾವಿರದ ಗಡಿ (48,296) ಸಮೀಪಿಸಿದೆ. ರಾಜ್ಯದಲ್ಲಿ ಸೋಂಕು ದೃಢ ಪ್ರಮಾಣ ಶೇ 25.44ಕ್ಕೆ ಏರಿಕೆಯಾಗಿದೆ.

ರಾಜ್ಯದ 20 ಜಿಲ್ಲೆಗಳಲ್ಲಿ 500ಕ್ಕೂ ಅಧಿಕ ಹೊಸ ಪ್ರಕರಣಗಳು ದೃಢಪಟ್ಟಿವೆ. ಈ ತಿಂಗಳು 30 ದಿನಗಳಲ್ಲಿಯೇ 5.30 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಇದರಿಂದಾಗಿ ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 15.23 ಲಕ್ಷ ದಾಟಿದೆ. ಇದರಲ್ಲಿ ಬೆಂಗಳೂರಿನಲ್ಲಿಯೇ ಸುಮಾರು ಅರ್ಧದಷ್ಟು (7.56 ಲಕ್ಷ) ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರು, ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಅಧಿಕ ಪ್ರಕರಣಗಳು ವರದಿಯಾಗುತ್ತಿರುವ ಪರಿಣಾಮ ಸಕ್ರಿಯ ಪ್ರಕರಣಗಳ ಸಂಖ್ಯೆ 3.82 ಲಕ್ಷಕ್ಕೆ ಏರಿಕೆಯಾಗಿದೆ.

ರಾಜ್ಯದ 7 ಜಿಲ್ಲೆಗಳಲ್ಲಿ ಸಾವಿರಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ ಹೊಸದಾಗಿ 26,756 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಮೈಸೂರು (3,500), ತುಮಕೂರು (1,801), ಮಂಡ್ಯ (1,348), ಬಳ್ಳಾರಿ (1,282), ಕಲಬುರ್ಗಿ (1,256), ದಕ್ಷಿಣ ಕನ್ನಡ (1,205) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ವರದಿಯಾಗಿವೆ.

ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 93 ಮಂದಿ ಸೇರಿದಂತೆ ರಾಜ್ಯದಲ್ಲಿ 217 ಮಂದಿ ಸಾವಿಗೀಡಾಗಿದ್ದಾರೆ. ಹಾಸನದಲ್ಲಿ 19 ಮಂದಿ, ಮೈಸೂರಿನಲ್ಲಿ 13 ಮಂದಿ, ಬಳ್ಳಾರಿಯಲ್ಲಿ 11 ಮಂದಿ, ಧಾರವಾಡದಲ್ಲಿ 7 ಮಂದಿ, ಚಾಮರಾಜನಗರ, ಬೀದರ್, ದಾವಣಗೆರೆ, ಕಲಬುರ್ಗಿ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ತಲಾ 6 ಮಂದಿ ಮೃತಪಟ್ಟಿದ್ದಾರೆ. ಮರಣ ಹೊಂದಿದವರಲ್ಲಿ ಬಹುತೇಕರು ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. ಈವರೆಗೆ ಕೋವಿಡ್‌ನಿಂದ ಸಾವಿಗೀಡಾದವರ ಸಂಖ್ಯೆ 15,523ಕ್ಕೆ ಏರಿಕೆಯಾಗಿದೆ. 

ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಏರಿಕೆ ಮಾಡಲಾಗಿದೆ. ಒಂದು ದಿನದ ಅವಧಿಯಲ್ಲಿ 1.89 ಲಕ್ಷ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಸೋಂಕಿತರಲ್ಲಿ 14,884 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 11.24 ಲಕ್ಷ ದಾಟಿದೆ.

ಜಿಲ್ಲಾವಾರು ಕೋವಿಡ್ ವಿವರ 


  

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು