ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್–19 ದೃಢಪಟ್ಟ 1,890 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 34 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 1,631 ಮಂದಿ ಗುಣಮುಖರಾಗಿದ್ದಾರೆ.
ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 29,03,137ಕ್ಕೆ ಏರಿಕೆಯಾಗಿದ್ದು, ಈ ಪೈಕಿ 28,43,110 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 36,525 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ ರಾಜ್ಯದಾದ್ಯಂತ ಒಟ್ಟು 23,478 ಪ್ರಕರಣಗಳು ಸಕ್ರಿಯವಾಗಿವೆ.
ಕೋವಿಡ್ ಖಚಿತ ಪ್ರಕರಣಗಳ ಪ್ರಮಾಣ ಶೇ.1.30 ಮತ್ತು ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ.1.79ರಷ್ಟಿದೆ.
ಬೆಂಗಳೂರಿನಲ್ಲಿ 426 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 345, ಉಡುಪಿಯಲ್ಲಿ 155, ಮೈಸೂರಿನಲ್ಲಿ 142, ಹಾಸನದಲ್ಲಿ 135 ಹಾಗೂ ಬೆಳಗಾವಿಯಲ್ಲಿ 103 ಹೊಸ ಪ್ರಕರಣಗಳು ದಾಖಲಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.