ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್–19 ದೃಢಪಟ್ಟ ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 346 ಮಂದಿ ಮೃತಪಟ್ಟಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದ ಅಂತರದಲ್ಲಿ 50,112 ಪ್ರಕರಣಗಳು ದೃಢಪಟ್ಟಿವೆ. ಕೊರೊನಾ ವೈರಸ್ ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ 32.28ರಷ್ಟಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟ 23,106 ಪ್ರಕರಣಗಳು ವರದಿಯಾಗಿದ್ದು, 161 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 26,841 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 4,87,288ಕ್ಕೆ ಏರಿಕೆಯಾಗಿದೆ.

ಮೈಸೂರಿನಲ್ಲಿ 2,790 ಪ್ರಕರಣಗಳು, ತುಮಕೂರಿನಲ್ಲಿ 2,335 ಪ್ರಕರಣಗಳು, ಉಡುಪಿಯಲ್ಲಿ 1,655 ಪ್ರಕರಣಗಳು, ಹಾಸನದಲ್ಲಿ 1,604 ಪ್ರಕರಣಗಳು, ಮಂಡ್ಯದಲ್ಲಿ 1,621 ಪ್ರಕರಣಗಳು ಹಾಗೂ ದಕ್ಷಿಣ ಕನ್ನಡದಲ್ಲಿ 1,529 ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಒಟ್ಟು 17.41 ಲಕ್ಷಕ್ಕೂ ಅಧಿಕ ಪ್ರರಕಣಗಳು ದಾಖಲಾಗಿವೆ. ಈ ಪೈಕಿ 12.36 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದರೆ, 16,884 ಮಂದಿ ಮೃತಪಟ್ಟಿದ್ದಾರೆ.

ಓದಿ:ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ: ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.