ಶನಿವಾರ, ಮೇ 15, 2021
24 °C

Covid-19 Karnataka Updates: 3,082 ಹೊಸ ಪ್ರಕರಣ, 12 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಭಾನುವಾರ 3,082 ಕೋವಿಡ್ ದೃಢಪಟ್ಟ ಹೊಸ ಪ್ರಕರಣಗಳು ವರದಿಯಾಗಿದ್ದು, 12 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,87,012ಕ್ಕೆ ಏರಿಕೆಯಾಗಿದೆ. ಇದುವರೆಗೆ 9,51,452 ಮಂದಿ ಗುಣಮುಖರಾಗಿದ್ದು, 12,504 ಸೋಂಕಿತರು ಸಾವಿಗೀಡಾಗಿದ್ದಾರೆ.

ಹೊಸ ಪ್ರಕರಣಗಳು ಏರುಗತಿ ಪಡೆದ ಕಾರಣ ಸಕ್ರಿಯ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದ್ದು, 23,037 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 204 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ.

ಇಂದು ಬೆಂಗಳೂರು ನಗರದಲ್ಲಿ 2004, ಕಲಬುರ್ಗಿ 159, ಮೈಸೂರು 114, ಉಡುಪಿ 115, ದಕ್ಷಿಣ ಕನ್ನಡ 68, ಹಾಸನ 65, ಬೀದರ್ 63, ಧಾರವಾಡ 60, ಬಳ್ಳಾರಿ 53, ಬೆಂಗಳೂರು ಗ್ರಾಮಾಂತರ 46, ಮಂಡ್ಯ 34, ಶಿವಮೊಗ್ಗ ಜಿಲ್ಲೆಯಲ್ಲಿ 33 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ಇವನ್ನೂ ಓದಿ...

ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ ಕಾರಣವಾದ ಮೋದಿ ಭೇಟಿ: ಈವರೆಗೆ 10 ಸಾವು

ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ ಬೆಂಬಲಿಗರಿಂದ ಡಿಕೆಶಿ ಕಾರಿನ ಮೇಲೆ ಚಪ್ಪಲಿ ಎಸೆತ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು