ಸೋಮವಾರ, ಜೂನ್ 14, 2021
23 °C

Covid-19 Karnataka Updates: 47,930 ಹೊಸ ಪ್ರಕರಣ, 490 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 47,930 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದ್ದು, ಸೋಂಕು ದೃಢ ಪ್ರಮಾಣ ಶೇ 32.71ಕ್ಕೆ ತಲುಪಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 5.64 ಲಕ್ಷಕ್ಕೆ ಏರಿಕೆಯಾಗಿದೆ.

ಕಳೆದ ಮಾರ್ಚ್‌ ಅಂತ್ಯಕ್ಕೆ 28 ಸಾವಿರ ಸಕ್ರಿಯ ಪ್ರಕರಣಗಳಿದ್ದವು. ಬಳಿಕ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದುಕೊಂಡಿದೆ. 48 ಗಂಟೆಗಳಲ್ಲಿಯೇ 95,493 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಈ ತಿಂಗಳು 9 ದಿನ ಗಳಲ್ಲಿ 4.11 ಲಕ್ಷ ಪ್ರಕರಣಗಳು ವರದಿ ಯಾಗಿವೆ. ಇದರಿಂದಾಗಿ ಈವರೆಗೆ ಸೋಂಕಿತರಾದವರ ಸಂಖ್ಯೆ 19.34 ಲಕ್ಷಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿತರಲ್ಲಿ ಬೆಂಗ ಳೂರಿನಲ್ಲಿ 281 ಮಂದಿ ಸೇರಿದಂತೆ ರಾಜ್ಯದಲ್ಲಿ 490 ಮಂದಿ ಸಾವಿಗೀಡಾಗಿದ್ದಾರೆ. ಬಳ್ಳಾರಿಯಲ್ಲಿ 21 ಮಂದಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ತಲಾ 17 ಮಂದಿ, ಚಾಮರಾಜನಗರದಲ್ಲಿ 15 ಮಂದಿ, ಮೈಸೂರು ಹಾಗೂ ರಾಮನಗರದಲ್ಲಿ ತಲಾ 13 ಮಂದಿ, ಕಲಬುರ್ಗಿಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಮರಣ ಹೊಂದಿದವರಲ್ಲಿ ಬಹುತೇಕರು ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. 9 ದಿನಗಳಲ್ಲಿ 2,982 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 18,776 ಕ್ಕೆ ಏರಿಕೆಯಾಗಿದೆ.

ಕೆಲ ದಿನಗಳಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗುತ್ತಿವೆ.  ಬೆಂಗಳೂರಿನಲ್ಲಿ ಹೊಸದಾಗಿ 20,897 ಪ್ರಕರಣಗಳು ವರದಿಯಾಗಿವೆ. ಹಾಸನ (2,349), ಬಳ್ಳಾರಿ (2,141), ತುಮಕೂರು (2,001), ಮಂಡ್ಯ (1,959), ಮೈಸೂರು (1,854) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ವರದಿಯಾಗಿವೆ. ಕೋವಿಡ್ ಪರೀಕ್ಷೆಗಳ ಸಂಖ್ಯೆಯು ಇಳಿಕೆ ಕಂಡಿದ್ದು, ಒಂದು ದಿನದ ಅವಧಿಯಲ್ಲಿ 1.46 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕೋವಿಡ್ ಪೀಡಿತರಲ್ಲಿ 31,796 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 13.51 ಲಕ್ಷ ದಾಟಿದೆ.

ದೆಹಲಿ, ಉತ್ತರಪ್ರದೇಶದಲ್ಲಿ ಲಾಕ್‌ಡೌನ್ ವಿಸ್ತರಣೆ
ನವದೆಹಲಿ:
ಕೋವಿಡ್-19 ಸೋಂಕು ಪ್ರಕರಣ ಹೆಚ್ಚುತ್ತಿ ರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಮೇ 17ರ ವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಕೇಜ್ರಿ ವಾಲ್ ಮಾಹಿತಿ ನೀಡಿದ್ದಾರೆ. ಕೋವಿಡ್-19 ಎರಡನೇ ಅಲೆ ತೀವ್ರವಾಗಿ ವ್ಯಾಪಿಸಿದ ಹಿನ್ನೆಲೆಯಲ್ಲಿ ಏ. 20ರಂದು ದೆಹಲಿಯಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕಳೆದ ಎರಡು ಮೂರು ದಿನಗಳಲ್ಲಿ ಪಾಸಿಟಿವ್ ಪ್ರಕರಣಗಳು ಶೇಕಡಾ 35ರಿಂದ 23ಕ್ಕೆ ಇಳಿಕೆಯಾಗಿದೆ ಎಂದಿದ್ದಾರೆ.

ಲಖನೌ: ಉತ್ತರಪ್ರದೇಶ ರಾಜ್ಯದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ಅನ್ನು ಮೇ 17ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ.

ಸದ್ಯ ಜಾರಿಯಲ್ಲಿರುವ ಲಾಕ್‌ಡೌನ್‌ ಮೇ 10ರಂದು ಬೆಳಿಗ್ಗೆ 7ಕ್ಕೆ ಮುಕ್ತಾಯಗೊಳ್ಳಬೇಕಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು