ಸೋಮವಾರ, ಏಪ್ರಿಲ್ 19, 2021
31 °C

Covid-19 Karnataka Update: ರಾಜ್ಯದಲ್ಲಿ 5,785 ಪ್ರಕರಣಗಳು ಸಕ್ರಿಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್‌–ಪ್ರಾತಿನಿಧಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌ –19 ದೃಢಪಟ್ಟ 366 ಪ್ರಕರಣಗಳು ದಾಖಲಾಗಿವೆ.

ಮಂಗಳವಾರ ಕೊರೊನಾ ವೈರಸ್‌ ಸೋಂಕಿನಿಂದ 513 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, ಇಬ್ಬರು ಮೃತಪಟ್ಟಿದ್ದಾರೆ. ಪ್ರಸ್ತುತ 5,785 ಪ್ರಕರಣಗಳು ಸಕ್ರಿಯವಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಒಟ್ಟು 9.43 ಲಕ್ಷಕ್ಕಿಂತ ಅಧಿಕ ಪ್ರಕರಣಗಳು ದಾಖಲಾಗಿದ್ದು, 9.25 ಲಕ್ಷಕ್ಕಿಂತ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಈವರೆಗೂ 12,241 ಮಂದಿ ಸಾವಿಗೀಡಾಗಿದ್ದಾರೆ.

143 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ 195 ಪ್ರಕರಣಗಳು, ಬೆಂಗಳೂರು ಗ್ರಾಮಾಂತದಲ್ಲಿ 20, ದಕ್ಷಿಣ ಕನ್ನಡದಲ್ಲಿ 29, ತುಮಕೂರಿನಲ್ಲಿ 17 ಪ್ರಕರಣಗಳು, ಮೈಸೂರಿನಲ್ಲಿ 15 ಪ್ರಕರಣಗಳು ಹಾಗೂ ಬೆಳಗಾವಿಯಲ್ಲಿ 12 ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು