ಸೋಮವಾರ, ಅಕ್ಟೋಬರ್ 26, 2020
30 °C

ಕೋವಿಡ್: ಅಧ್ಯಯನಕ್ಕೆ ತಜ್ಞರ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್‌ ಕಾಯಿಲೆಯಿಂದ ಚೇತರಿಸಿಕೊಂಡವರ ಆರೋಗ್ಯದ ಮೇಲೆ ಸೋಂಕು ಯಾವ ರೀತಿ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.

‘ಪ್ರಾರಂಭಿಕ ಮತ್ತು ತೀವ್ರ ಪ್ರಮಾಣದ ರೋಗ ಲಕ್ಷಣಗಳಿಂದ ಚೇತರಿಸಿಕೊಂಡವರನ್ನು ಅಧ್ಯಯನಕ್ಕೆ ಒಳಪಡಿಸಲಾಗುವುದು. ಮಧುಮೇಹ, ಅಧಿಕ ರಕ್ತದೊತ್ತಡ ಸೇರಿದಂತೆ ವಿವಿಧ ರೋಗಗಳಿಗೆ ಒಳಪಟ್ಟವರ ಆರೋಗ್ಯದಲ್ಲಿನ ವ್ಯತ್ಯಾಸದ ಬಗ್ಗೆಯೂ ವಿಶ್ಲೇಷಣೆ ನಡೆಸಲಾಗುವುದು’ ಎಂದು ಅವರು ಟ್ವೀಟ್ ಮಾಡಿದ್ದಾರೆ. 

‘ತಜ್ಞರ ಸಮಿತಿ ನಡೆಸುವ ಅಧ್ಯಯನದಿಂದ ಕೊರೊನಾ ಸೋಂಕು ಮನುಷ್ಯನ ದೇಹದ ಮೇಲೆ ಯಾವ ಪ್ರಮಾಣದಲ್ಲಿ ದಾಳಿ ನಡೆಸಲಿದೆ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಸೂಕ್ತ ಚಿಕಿತ್ಸಾ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಕೂಡ ಸಹಕಾರಿಯಾಗಲಿದೆ’ ಎಂದು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು