ಬೆಂಗಳೂರು: ಕೊರೊನಾ ಸೋಂಕಿತರಲ್ಲಿ ಭಾನುವಾರ 4,670 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಗುಣಮುಖರ ಸಂಖ್ಯೆ ಲಕ್ಷದ ಗಡಿಯತ್ತ (93,908) ದಾಪುಗಾಲು ಇರಿಸಿದೆ.

ಬೆಂಗಳೂರಿನಲ್ಲಿ 1,948 ಮಂದಿ ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ 5,985 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 1.78 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಮತ್ತೆ 107 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದ್ದು, ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 3,198ಕ್ಕೆ ಏರಿಕೆಯಾಗಿದೆ.

ಬಳ್ಳಾರಿಯಲ್ಲಿ ಮತ್ತೆ 380 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಅಲ್ಲಿ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ (10,371) ದಾಟಿದೆ.ಭಾನುವಾರ ದೃಢಪಟ್ಟ ಮರಣ ಪ್ರಕರಣಗಳಲ್ಲಿ 23 ಮಂದಿ 50 ವರ್ಷದೊಳಗಿನವರಾಗಿದ್ದಾರೆ. ಬೆಂಗಳೂರು (22), ಮೈಸೂರು (12), ಬಳ್ಳಾರಿ (9), ದಾವಣಗೆರೆ (9), ಕೋಲಾರ (8), ಹಾಸನ (7) ಜಿಲ್ಲೆಯಲ್ಲಿ ಅಧಿಕ ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.