ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | 1.5 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಒಂದೇ ದಿನ 5,407 ಮಂದಿ ಗುಣಮುಖ
Last Updated 5 ಆಗಸ್ಟ್ 2020, 14:53 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಾದ್ಯಂತ ಬುಧವಾರ 5,619 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 100 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 1.5 ಲಕ್ಷ (1,51,449) ಕ್ಕೆ ತಲುಪಿದ್ದು, ಮೃತರ ಸಂಖ್ಯೆ 2804ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಒಂದೇ ದಿನ 1848 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 29 ಮಂದಿ ಸಾವಿಗೀಡಾಗಿದ್ದಾರೆ.

ಸದ್ಯ ರಾಜ್ಯದಲ್ಲಿ 73, 958 ಸಕ್ರಿಯ ಪ್ರಕರಣಗಳು ಇವೆ. ಈವರೆಗೆ 74,679 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬಳ್ಳಾರಿ 631, ಬೆಳಗಾವಿ 293, ಮೈಸೂರು 261, ದಾವಣಗೆರೆ 224, ಧಾರವಾಡ 199, ಕಲಬುರ್ಗಿ 197, ಉಡುಪಿ 173, ಕೊಪ್ಪಳ 154, ದಕ್ಷಿಣ ಕನ್ನಡ 149, ಹಾಸನ 137, ಚಿಕ್ಕಬಳ್ಳಾಪುರ 129, ಉತ್ತರ ಕನ್ನಡ ಜಿಲ್ಲೆಯಲ್ಲಿ 125 ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT