ಬೆಂಗಳೂರು: ರಾಜ್ಯದಲ್ಲಿ ಗುರುವಾರಸಂಜೆ 5 ಗಂಟೆಯಿಂದ ಶುಕ್ರವಾರ ಸಂಜೆ 5ರ ವರೆಗೆ ಒಟ್ಟು 6,670 ಹೊಸ ಕೋವಿಡ್–19ಪ್ರಕರಣಗಳು ದೃಢಪಟ್ಟಿದ್ದು, 101 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,64,924ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,998ಕ್ಕೆ ತಲುಪಿದೆ.ಕಳೆದ 24 ಗಂಟೆಗಳಲ್ಲಿ 3,951 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಚೇತರಿಸಿಕೊಂಡವರ ಸಂಖ್ಯೆ 84,232ಕ್ಕೆ ಹೆಚ್ಚಾಗಿದೆ. ಇನ್ನೂ 77,686 ಪ್ರಕರಣಗಳು ಸಕ್ರಿಯವಾಗಿವೆ. 678 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 2,147 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 69,572ಕ್ಕೆ ಏರಿಕೆಯಾಗಿದೆ. ಇದರಲ್ಲಿ 35,063 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇನ್ನೂ 33,308 ಪ್ರಕರಣಗಳು ಸಕ್ರಿಯವಾಗಿವೆ.

ಬಳ್ಳಾರಿಯಲ್ಲಿ 684, ಬೆಳಗಾವಿ 390, ಕಲಬುರ್ಗಿ 271, ಧಾರವಾಡ 266, ಉಡುಪಿ 246, ಮೈಸೂರಿನಲ್ಲಿ 242, ಕೊಪ್ಪಳ 173, ರಾಯಚೂರು 171, ದಕ್ಷಿಣ ಕನ್ನಡ 166, ಶಿವಮೊಗ್ಗ ಜಿಲ್ಲೆಯಲ್ಲಿ 151 ಪ್ರಕರಣಗಳು ಪತ್ತೆಯಾಗಿವೆ.

ಇದನ್ನೂ ಓದಿ...ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.