ಬುಧವಾರ, ಜೂನ್ 23, 2021
29 °C
ರಾಜ್ಯದಲ್ಲಿ 7,385 ಹೊಸ ಪ್ರಕರಣ, 102 ಮಂದಿ ಸಾವು

Covid-19 Karnataka Update: 20 ದಿನ: 1.20 ಲಕ್ಷ ಜನ ಗುಣಮುಖ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿತರಲ್ಲಿ ಗುರುವಾರ 6,231 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 1.70 ಲಕ್ಷಕ್ಕೆ ಏರಿಕೆಯಾಗಿದೆ. 

20 ದಿನಗಳಲ್ಲಿ 1,20,593 ಮಂದಿ ಗುಣಮುಖರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 6,029 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ನಿತ್ಯ 50 ಸಾವಿರಕ್ಕೂ ಅಧಿಕ ಕೋವಿಡ್‌ ಪರೀಕ್ಷೆ ನಡೆಯುತ್ತಿದ್ದು, ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಗುರುವಾರ ಮತ್ತೆ 7,385 ಕೋವಿಡ್ ಪ್ರಕರಣಗಳು ಗುರುವಾರ ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2.56 ಲಕ್ಷ ದಾಟಿದೆ. ಮತ್ತೆ 102 ಮಂದಿ ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 4,429ಕ್ಕೆ ತಲುಪಿದೆ.

ರಾಜ್ಯದಲ್ಲಿ 48 ಗಂಟೆಗಳಲ್ಲಿ 14,877 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈ ತಿಂಗಳು ಪ್ರತಿನಿತ್ಯ ಸರಾಸರಿ 6,643 ಕೋವಿಡ್‌ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ 705 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಸದ್ಯ ರಾಜ್ಯದಲ್ಲಿ 82,149 ಸಕ್ರಿಯ‌ ಪ್ರಕರಣಗಳಿವೆ. 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು