ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid Karnataka Update: 5 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಇಂದು 8,626 ಹೊಸ ಪ್ರಕರಣ ದೃಢ, 179 ಮಂದಿ ಸಾವು
Last Updated 18 ಸೆಪ್ಟೆಂಬರ್ 2020, 15:59 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 8,626 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 179 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 5,02,982ಕ್ಕೆ ಏರಿಕೆಯಾಗಿದೆ. ಈವರೆಗೆ 7,808 ಮಂದಿ ಸಾವಿಗೀಡಾಗಿದ್ದಾರೆ.

ಇಂದು 10,949 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಓಟ್ಟು 3,94,026 ಮಂದಿ ಚೇತರಿಸಿಕೊಂಡಿದ್ದಾರೆ.ಸದ್ಯ ರಾಜ್ಯದಲ್ಲಿ 1,01,129 ಸಕ್ರಿಯ ಪ್ರಕರಣಗಳಿದ್ದು, 814 ಮಂದಿ ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಂಗಳೂರಿನಲ್ಲಿ 3,623 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 37 ಮಂದಿ ಮೃತಪಟ್ಟಿದ್ದಾರೆ.ಮೈಸೂರಿನಲ್ಲಿ 600, ಉಡುಪಿ 493, ದಕ್ಷಿಣ ಕನ್ನಡ 456, ಬಳ್ಳಾರಿ 296, ಶಿವಮೊಗ್ಗ 257, ಬೆಳಗಾವಿ 221, ತುಮಕೂರು ಜಿಲ್ಲೆಯಲ್ಲಿ208 ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT