ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಠಿಣ ಕೋವಿಡ್ ರೂಲ್ಸ್: ಮದುವೆಗೆ ಪಾಸ್ ಕಡ್ಡಾಯ, ಜಾತ್ರೆಗೆ ನಿರ್ಬಂಧ ಜಾರಿ

Last Updated 17 ಏಪ್ರಿಲ್ 2021, 9:19 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊರೊನಾ ತೀವ್ರವಾಗಿ ಹರಡುತ್ತಿರುವ ಕಾರಣ ರಾಜ್ಯದಲ್ಲಿ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಜಾತೆಗಳು ನಡೆದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ’ ಎಂದು ಕಂದಾಯ ಸಚಿವ ಆರ್‌. ಅಶೋಕ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿಯ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಜೊತೆ ಜಿಲ್ಲಾಧಿಕಾರಿಗಳೊಂದಿಗೆ ಶನಿವಾರ ವಿಡಿಯೊ ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

‘ಸಣ್ಣ ಜಾತ್ರೆಗಳಾದರೆ ತಹಶೀಲ್ದಾರ್‌ ಹೊಣೆ ಆಗಬೇಕಾಗುತ್ತದೆ’ ಎಂದೂ ಅಶೋಕ ತಿಳಿಸಿದರು.

ಕೊರೊನಾ ನಿಯಂತ್ರಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮದುವೆ ಮನೆಗಳಲ್ಲಿ ಜನರನ್ನು ನಿಯಂತ್ರಿಸದಿದ್ದರೆ ಎಫ್‌ಐಆರ್‌ ದಾಖಲಿಸಲಾಗುವುದು. ಒಂದು ವೇಳೆ ಹೆಚ್ಚುವರಿ ಪಾಸ್‌ ನೀಡಿದರೆ ಅಂಥ ಕಲ್ಯಾಣ ಮಂಟಪಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

‘ಕಲ್ಯಾಣ ಮಂಟಪ ಬುಕ್‌ ಮಾಡಲು ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ. ಜಿಲ್ಲಾಡಳಿತ ನಿಗದಿತ ಸಂಖ್ಯೆಯ ಪಾಸ್‌ ವಿತರಿಸಲಿದೆ. ಈಗಾಗಲೇ ಬುಕ್‌ ಮಾಡಿದ್ದರೆ ಸಮಸ್ಯೆ ಇಲ್ಲ’ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ವಿಡಿಯೊ ಸಂವಾದ: ‘ಬೆಂಗಳೂರಿನ ಸಂಸದರು, ಶಾಸಕರು ಮತ್ತು ಅಧಿಕಾರಿಗಳ ಜೊತೆ ಇದೇ 19ರಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಡಿಯೊ ಸಂವಾದ ನಡೆಸಲಿದ್ದಾರೆ. ಈ ವೇಳೆ, ಬೆಂಗಳೂರಿನಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಲಿದ್ದಾರೆ’ ಎಂದು ಬೊಮ್ಮಾಯಿ ತಿಳಿಸಿದರು.

‘7,500 ಆಕ್ಸಿಜನ್‌ ಸಿಲಿಂಡರ್‌ ಪೂರೈಕೆಗೆ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿದ್ದೇವೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT