ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 7040 ಹೊಸ ಪ್ರಕರಣ, 124 ಸೋಂಕಿತರ ಸಾವು

Last Updated 16 ಆಗಸ್ಟ್ 2020, 15:24 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 7,040 ಮಂದಿ ಹೊಸದಾಗಿ ಕೋವಿಡ್ ಪೀಡಿತರಾಗಿರುವುದು ಭಾನುವಾರ ದೃಢಪಟ್ಟಿದೆ. 124 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಆ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 2,26,966 ಕ್ಕೆ ಏರಿಕೆಯಾಗಿದೆ.

ಚೇತರಿಸಿಕೊಳ್ಳುವವರ ಸಂಖ್ಯೆಯಲ್ಲಿಯೂ ಏರಿಕೆ ಕಾಣುತ್ತಿದ್ದು, ಬೆಂಗಳೂರಿನಲ್ಲಿ 2,356 ಮಂದಿ ಸೇರಿದಂತೆ ರಾಜ್ಯದಲ್ಲಿ ಒಟ್ಟು 6,680 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 1,41,491ಕ್ಕೆ ತಲುಪಿದೆ. 81,512 ಅಧಿಕ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಒಂದೇ ದಿನ 43,626 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ: ರಾಜ್ಯ ರಾಜಧಾನಿಯಲ್ಲಿ ಹೊಸದಾಗಿ 2,131 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 89,811ಕ್ಕೆ ತಲುಪಿದೆ ದಾಟಿದೆ. ಮೈಸೂರು (620), ಬೆಳಗಾವಿ (478), ಬಳ್ಳಾರಿ (381), ಕಲಬುರಗಿ(285), ಧಾರವಾಡ (268), ದಕ್ಷಿಣ ಕನ್ನಡ (229), ದಾವಣಗೆರೆ (218), ಕೊಪ್ಪಳ(211) ಜಿಲ್ಲೆಗಳಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT