ಮಂಗಳವಾರ, ಸೆಪ್ಟೆಂಬರ್ 29, 2020
25 °C

ಪತ್ನಿ ಕೊರೊನಾ ಸೋಂಕಿತಳಾದಾಗ ಪರಾರಿಯಾದ ಪತಿ ಅಂತ್ಯಸಂಸ್ಕಾರಕ್ಕೂ ಬರಲಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪತ್ನಿಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆ, ತನಗೂ ಸೋಂಕು ತಗುಲಬಹುದು ಎಂಬ ಕಾರಣದಿಂದ ಪತಿ ಪರಾರಿಯಾಗಿದ್ದಾನೆ. ಪತ್ನಿಯ ಅಂತ್ಯಸಂಸ್ಕಾರಕ್ಕೂ ಬಂದಿಲ್ಲ. 

ನಗರದ ಶಂಕರಮಠ ವಾರ್ಡ್‌ನ ಜೆ.ಸಿ.‌ನಗರದಲ್ಲಿ ಈ‌ ದಂಪತಿ‌ ವಾಸವಾಗಿದ್ದರು. ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಗಂಡ ಕಾರು ಚಾಲಕನಾಗಿದ್ದರೆ, ಪತ್ನಿ ಒರಾಯನ್ ಮಾಲ್‌ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಕಾರಣ ಆದಿಚುಂಚನಗಿರಿ ಆಸ್ಪತ್ರೆಗೆ ಮಹಿಳೆ ದಾಖಲಾಗಿದ್ದರು. ಕೊರೊನಾ ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿತ್ತು. 

'ದಂಪತಿಯು ನಮ್ಮ ಮನೆಯಲ್ಲಿಯೇ ಬಾಡಿಗೆಗೆ ಇದ್ದರು. ಪತ್ನಿಗೆ ಸೋಂಕು ತಗುಲಿರುವುದು ತಿಳಿಯುತ್ತಿದ್ದಂತೆ ಪತಿ ಪರಾರಿಯಾಗಿದ್ದಾನೆ. ಅವನು ನಾಪತ್ತೆಯಾದ ರಾತ್ರಿಯೇ ಪತ್ನಿ ಅಸುನೀಗಿದ್ದಾರೆ.  ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ನಂತರ ಮೊಬೈಲ್ ಸ್ವಿಚ್ಡ್ ಆಫ್ ಮಾಡಿದ್ದಾನೆ' ಎಂದು ಪಾಲಿಕೆ ಸದಸ್ಯ ಎಂ.ಶಿವರಾಜ್ ಹೇಳಿದರು. 

'ಪೊಲೀಸರಿಗೆ ದೂರು ನೀಡಲಾಗಿದೆ. ಮಹಿಳೆಯ ಶವವನ್ನು ಆಂಬುಲೆನ್ಸ್‌ನಲ್ಲಿ ತೆಗೆದುಕೊಂಡು ಹೋಗಿ ಕೋವಿಡ್ ಮಾರ್ಗಸೂಚಿ ಅನ್ವಯ ಅಂತ್ಯಸಂಸ್ಕಾರ ಮಾಡಲಾಗಿದೆ' ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು