ಬುಧವಾರ, ಜನವರಿ 20, 2021
17 °C

Covid-19 Karnataka Update: ಕೋವಿಡ್‌ ಪರೀಕ್ಷೆ; ರಾಜ್ಯವೇ ಪ್ರಥಮ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

 

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆ ಭಾನುವಾರಕ್ಕಿಂತ ಸೋಮವಾರ 30 ಸಾವಿರ ಕಡಿಮೆಯಾಗಿದ್ದರೂ ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. 6.11 ಕೋಟಿ ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ಪ್ರತಿ ಲಕ್ಷಕ್ಕೆ 16,360 ಜನ ಪರೀಕ್ಷೆಗೆ ಒಳಗಾಗಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ ಎರಡನೇ ಸ್ಥಾನದಲ್ಲಿದೆ. ಅಲ್ಲಿ ಪ್ರತಿ ಲಕ್ಷ ಜನರಲ್ಲಿ 14,769 ಜನ ಪರೀಕ್ಷೆಗೆ ಒಳಗಾಗಿದ್ದಾರೆ. ಕೊನೆಯ ಸ್ಥಾನದಲ್ಲಿ ತೆಲಂಗಾಣ (221) ಇದೆ. ಉತ್ತರ ಪ್ರದೇಶ, ಬಿಹಾರ, ಆಂಧ್ರಪ್ರದೇಶ, ಲಕ್ಷದ್ವೀಪದ ಮಾಹಿತಿ ಲಭ್ಯವಾಗಿಲ್ಲ.

30 ಸಾವಿರ ಕಡಿಮೆ: ರಾಜ್ಯದಲ್ಲಿ ಭಾನುವಾರ 1,26,904 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಸೋಮವಾರ 8,682 ಆ್ಯಂಟಿಜೆನ್‌ ಮತ್ತು 87,413 ಆರ್‌ಟಿ ಪಿಸಿಆರ್‌ ಸೇರಿದಂತೆ ಒಟ್ಟು 96,095 ಜನ ಪರೀಕ್ಷೆಗೆ ಒಳಪಟ್ಟಿದ್ದಾರೆ. ನ.22ರಂದು ಹೊಸ ಪ್ರಕರಣಗಳ ಸಂಖ್ಯೆ 1,704 ಇದ್ದರೆ, ನ.23ರಂದು ಈ ಸಂಖ್ಯೆ 1,509ಕ್ಕೆ ಇಳಿದಿದೆ. ರಾಜ್ಯದಲ್ಲಿ ಈವರೆಗೆ 1.03 ಕೋಟಿ ಜನ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದಾರೆ.

ಸೋಂಕಿತರು 8.74 ಲಕ್ಷ: ಹೊಸದಾಗಿ 1,509 ಜನರಿಗೆ ಸೋಂಕು ತಗುಲುವುದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 8,74,555 ಕ್ಕೆ ತಲುಪಿದೆ. 1,645 ಮಂದಿ ಗುಣಮುಖರಾಗಿದ್ದು, ಈವರೆಗೆ 8,38,150 ಮಂದಿ ಕೋವಿಡ್‌ನಿಂದ ಮುಕ್ತರಾಗಿದ್ದಾರೆ. ಸೋಮವಾರ 24 ಮಂದಿ ಸಾವಿಗೀಡಾಗುವುದರೊಂದಿಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 11,678ಕ್ಕೆ ತಲುಪಿದೆ.

ಸಕ್ರಿಯ ಪ್ರಕರಣಗಳ ಪೈಕಿ 24,708 ಮಂದಿ ಕೋವಿಡ್ ಆರೈಕೆ ಕೇಂದ್ರ, ಆಸ್ಪತ್ರೆ ಮತ್ತು ಮನೆಯಲ್ಲಿ ಆರೈಕೆ ಮತ್ತು ಚಿಕಿತ್ಸೆಯಲ್ಲಿದ್ದಾರೆ. 438 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜಧಾನಿಯಲ್ಲಿ 10 ಸಾವು: ಬೆಂಗಳೂರಿನಲ್ಲಿ ಹೊಸದಾಗಿ 725 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದರೆ 10 ಜನ ಸಾವಿಗೀಡಾಗಿದ್ದಾರೆ. 478 ಮಂದಿ ಗುಣಮುಖರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ನಾಲ್ಕು, ಮೈಸೂರಿನಲ್ಲಿ ಇಬ್ಬರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಚಾಮರಾಜನಗರ, ಧಾರವಾಡ, ರಾಯಚೂರು, ಉತ್ತರ ಕನ್ನಡ, ವಿಜಯಪುರದಲ್ಲಿ ತಲಾ ಒಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು