ಶುಕ್ರವಾರ, ಅಕ್ಟೋಬರ್ 30, 2020
27 °C

ಕೊರೊನಾ ಸಮಯದಲ್ಲಿ ಶಾಲೆಗಳ ಆರಂಭ: ಸಲಹೆ ನೀಡಲು ಸುರೇಶ್ ಕುಮಾರ್ ಕೋರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಪರಿಸ್ಥಿತಿಯಲ್ಲಿ ಶಾಲಾರಂಭ ಮತ್ತು ಸಮುದಾಯದ ಸಹಕಾರ ಕುರಿತಂತೆ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ಎಲ್ಲ ಸಚಿವರು‌ ಮತ್ತು ಶಾಸಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. 

ಶಾಲೆಗಳನ್ನು ಯಾವಾಗ ಆರಂಭಿಸಬಹುದು, ಒಂದು ವೇಳೆ ಆರಂಭಿಸುವುದಾದರೆ ಯಾವ ತರಗತಿಯನ್ನು ಮೊದಲು ಆರಂಭಿಸಬಹುದು, ಸಮುದಾಯ ಮತ್ತು ಜನಪ್ರತಿನಿಧಿಗಳಿಂದ ಶಿಕ್ಷಣ ಇಲಾಖೆ ಯಾವ ರೀತಿಯ ಸಹಕಾರ ನಿರೀಕ್ಷಿಸಬಹುದು ಎಂಬ ಬಗ್ಗೆ ಸಲಹೆ, ಸೂಚನೆ ನೀಡುವಂತೆ ಪತ್ರದಲ್ಲಿ ಅವರು ಕೋರಿದ್ದಾರೆ.

ಕೊರೊನಾ ಕಾರಣದಿಂದ ಕಳೆದ ಮಾರ್ಚ್ ನಲ್ಲಿ ಮುಚ್ಚಿದ ಶಾಲೆಗಳನ್ನು ಇನ್ನೂ ತೆರೆಯಲಾಗುತ್ತಿಲ್ಲ. ಜೂನ್ ನಲ್ಲಿ ಆರಂಭವಾಗಬೇಕಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆ ಇನ್ನೂ ಪೂರ್ಣಪ್ರಮಾಣದಲ್ಲಿ ಆರಂಭಗೊಂಡಿಲ್ಲ. ಅಲ್ಲದೆ, ಇದು ಹಲವು ಸಾಮಾಜಿಕ ಪಿಡುಗುಗಳಿಗೂ ಕಾರಣವಾಗುತ್ತಿದೆ.  ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಲಹೆ ನೀಡುವಂತೆ ಪತ್ರದಲ್ಲಿ ಕೋರಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದ ಪ್ರಸರಣ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಸಾಗಿದೆ. ಈ ಪರಿಸ್ಥಿತಿಯ ನಡುವೆಯೇ ಸಾಮಾಜಿಕ ಜೀವನ ತಹಬಂದಿಗೆ ಮರಳಬೇಕಿದೆ. ಕೊರೊನಾ ಕಾರಣಕ್ಕಾಗಿ ಅತ್ಯಂತ ಸಂಕಷ್ಟಕ್ಕೆ ಸಿಲುಕಿರುವುದು ಶಿಕ್ಷಣ ಕ್ಷೇತ್ರವಾಗಿದೆ ಎಂದೂ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು