ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಸೋಂಕಿತರ ಸಂಖ್ಯೆ 3.27 ಲಕ್ಷ

Last Updated 29 ಆಗಸ್ಟ್ 2020, 21:25 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 8,324 ಮಂದಿ ಕೋವಿಡ್ ಪೀಡಿತರಾಗಿರುವುದು ಶನಿವಾರ ದೃಢಪಟ್ಟಿದೆ. ಸೋಂಕಿತರಲ್ಲಿ ಮತ್ತೆ 8,110 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್‌ ಪರೀಕ್ಷೆಗಳ ಸಂಖ್ಯೆ ಹೆಚ್ಚುತ್ತಿದ್ದು, ಒಂದೇ ದಿನ 72,684 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಒಂದು ದಿನದ ಅವಧಿಯಲ್ಲಿ ನಡೆಸಲಾದ ಗರಿಷ್ಠ ಪರೀಕ್ಷೆಗಳು ಇವಾಗಿವೆ.

ಸೋಂಕಿತರ ಸಂಖ್ಯೆ ಕೆಲ ದಿನಗಳಿಂದ ಪ್ರತಿನಿತ್ಯ ಸರಾಸರಿ 8 ಸಾವಿರ ದಾಟುತ್ತಿದ್ದು, ಕೇವಲ 48 ಗಂಟೆಗಳಲ್ಲಿ 17,284 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3.27 ಲಕ್ಷಕ್ಕೆ ಏರಿಕೆಯಾಗಿದೆ.

ಮತ್ತೆ 115 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದ್ದು, ಮೃತರ ಸಂಖ್ಯೆ 5,483ಕ್ಕೆ ಏರಿದೆ. ಒಂದು ವಾರದಲ್ಲಿ 45,564 ಮಂದಿಗೆ ಕೋವಿಡ್ ವಾಸಿಯಾಗಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 7,884 ಮಂದಿ ಸೋಂಕಿತರಾಗಿರುವುದು ದೃಢಪಟ್ಟರೆ, 6,509 ಮಂದಿ ಚೇತರಿಸಿಕೊಂಡಿದ್ದಾರೆ. ಗುಣವಾದವರಒಟ್ಟು ಸಂಖ್ಯೆ 2.35 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT