ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆ ಪಡೆಯಲು ಭಾನುವಾರ ನಿಗದಿಪಡಿಸಲಾಗಿದ್ದ ಫಲಾನುಭವಿಗಳಲ್ಲಿ ಶೇ 10 ರಷ್ಟು ಮಂದಿ ಮಾತ್ರ ಹಾಜರಾಗಿದ್ದಾರೆ. ಇದು ಈವರೆಗೆ ದಿನವೊಂದಕ್ಕೆ ನಿಗದಿಪಡಿಸಲಾಗಿದ್ದ ಫಲಾನುಭವಿಗಳಲ್ಲಿ ಅತೀ ಕಡಿಮೆ ಹಾಜರಿಯಾಗಿದೆ.

ರಜಾ ದಿನವಾದ ಕಾರಣ ಕೇವಲ 47 ಕೇಂದ್ರಗಳಲ್ಲಿ ಮಾತ್ರ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯಲು 8,662 ಮಂದಿಯನ್ನು ಗುರುತಿಸಲಾಗಿತ್ತು. ಅವರಲ್ಲಿ 904 ಮಂದಿ ಹಾಜರಾಗಿ ಲಸಿಕೆ ಪಡೆದುಕೊಂಡಿದ್ದಾರೆ. ಉಳಿದವರು ಹಿಂಜರಿಕೆ ಸೇರಿದಂತೆ ನಾನಾ ಕಾರಣಗಳಿಂದ ಗೈರಾಗಿದ್ದಾರೆ. ಲಸಿಕೆ ಪಡೆದವರಲ್ಲಿ ಯಾರಲ್ಲಿಯೂ ತೀವ್ರ ಮತ್ತು ಗಂಭೀರ ಸ್ವರೂಪದ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಲಸಿಕೆ ವಿತರಣೆ ಪ್ರಾರಂಭವಾದಾಗಿನಿಂದ ಈವರೆಗೆ ನಿಗದಿಪಡಿಸಲಾಗಿದ್ದ 8,21,939 ಆರೋಗ್ಯ ಕಾರ್ಯಕರ್ತರಲ್ಲಿ 4,24,491 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದರಿಂದ ಶೇ 52 ರಷ್ಟು ಗುರಿ ಸಾಧ್ಯವಾಗಿದೆ. ಇವರಲ್ಲಿ 1.13 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 2,84,950 ಮುಂಚೂಣಿ ಯೋಧರನ್ನು ಈವರೆಗೆ ಲಸಿಕೆ ಪಡೆಯಲು ಗುರುತಿಸಲಾಗಿತ್ತು. ಅವರಲ್ಲಿ 1,20,172 ಮಂದಿ ಹಾಜರಾಗಿ ಲಸಿಕೆ ಪಡೆದುಕೊಂಡಿದ್ದಾರೆ. ಇದರಿಂದ ಶೇ 42ರಷ್ಟು ಗುರಿ ಸಾಧ್ಯವಾಗಿದೆ.

413 ಮಂದಿಗೆ ಸೋಂಕು: ರಾಜ್ಯದಲ್ಲಿ ಹೊಸದಾಗಿ 413 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.48 ಲಕ್ಷ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,294ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 353 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 9.29 ಲಕ್ಷ ದಾಟಿದೆ. 6,036 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 127 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ.

ಬೆಂಗಳೂರಿನಲ್ಲಿ 248 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.03 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 24 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 53,912ಕ್ಕೆ ಏರಿಕೆಯಾಗಿದೆ. ಕಲಬುರ್ಗಿಯಲ್ಲಿ 23, ಬೆಳಗಾವಿಯಲ್ಲಿ 15, ದಕ್ಷಿಣ ಕನ್ನಡದಲ್ಲಿ 11, ಉಡುಪಿ ಹಾಗೂ ವಿಜಯಪುರದಲ್ಲಿ ತಲಾ 10 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.