ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌-19: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪೂರ್ಣ ಗುಣಮುಖ

Last Updated 12 ಆಗಸ್ಟ್ 2020, 3:37 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಈಗ ಪೂರ್ಣ ಗುಣಮುಖರಾಗಿದ್ದಾರೆ.

ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಕಳೆದ ಮಂಗಳವಾರ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ.

ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT