ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಲಸಿಕೆ ಹಾಕಿಸಲು ಮನವೊಲಿಕೆ: ಕಠಿಣ ಕ್ರಮ ಇಲ್ಲ ಎಂದ ಡಾ.ಕೆ. ಸುಧಾಕರ್

Last Updated 2 ಡಿಸೆಂಬರ್ 2021, 4:25 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಎರಡನೇ ಡೋಸ್‌ ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರ ಮನವೊಲಿಸಲಾಗುತ್ತದೆಯೇ ಹೊರತು ಕಠಿಣ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದರು.

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಎರಡು ಡೋಸ್‌ ಲಸಿಕೆ ಪಡೆಯದವರಿಗೆ ಸರ್ಕಾರದಿಂದ ಕೊಡುವ ಸೌಲಭ್ಯಗಳನ್ನು ಕಡಿತ ಮಾಡಬೇಕು ಮತ್ತು ದಂಡ ಹಾಕಬೇಕು ಎಂಬ ಸಲಹೆಗಳನ್ನು ನೀಡಿತ್ತು. ಆದರೆ, ಸರ್ಕಾರ ಹಾಗೆ ಮಾಡುವುದಿಲ್ಲ. ಬದಲಿಗೆ ಲಸಿಕೆ ಪಡೆಯದಿರುವವರ ಮನವೊಲಿಸಿ ಲಸಿಕೆ ಪಡೆಯುವಂತೆ ಮಾಡಲಾಗುವುದು ಎಂದರು.

ಕಳೆದ ಎರಡು ದಿನಗಳಿಂದ ಲಸಿಕೆ ತೆಗೆದುಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಮನೆ– ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮ ಫಲಪ್ರದವಾಗಿದೆ ಎಂದು ಅವರು ಹೇಳಿದರು.

ಕೋವಿಡ್‌ ಪ್ರಕರಣಗಳು ಹೆಚ್ಚುವುದನ್ನು ತಡೆಯಲು ಟೆಲಿಮೆಡಿಸಿನ್‌, ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವುದು, ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಲಾಗುವುದು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಸಾರ್ವಜನಿಕರು ಸರ್ಕಾರದ ಜತೆಗೆ ಕೈ ಜೋಡಿಸಿದರೆ ಬೇಗನೇ ಆತಂಕದಿಂದ ಹೊರಬರಬಹುದು ಎಂದು ಹೇಳಿದರು.

ಓಮೈಕ್ರಾನ್‌ ಮಕ್ಕಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ, ಅದು ಬಹಳ ವೇಗವಾಗಿ ಹರಡುವ ವೈರಾಣು ಎಂಬುದಾಗಿ ತಿಳಿದು ಬಂದಿದೆ. ಮಕ್ಕಳ ಲಸಿಕೆ ಬಗ್ಗೆ ಕೇಂದ್ರ ಸರ್ಕಾರ ಚರ್ಚೆ ಮಾಡುತ್ತಿದೆ. ಶೀಘ್ರದಲ್ಲಿಯೇ ಮಕ್ಕಳ ಲಸಿಕೆ ಎಲ್ಲಾ ರಾಜ್ಯಗಳಲ್ಲಿ ಲಭ್ಯವಾಗುವ ನಿರೀಕ್ಷೆ ಇದೆ ಎಂದರು.

ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ಆರಂಭ: ವಿದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರಿಗೂ ವಿಮಾನ ನಿಲ್ದಾಣದಲ್ಲಿ ಬುಧವಾರದಿಂದಲೇ ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ಪರೀಕ್ಷೆ ಆರಂಭಿಸಲಾಗಿದೆ ಎಂದು ಸುಧಾಕರ್‌ ಹೇಳಿದರು.

ವಿದೇಶದಿಂದ ಬರುವ ಪ್ರತಿಯೊಬ್ಬರಿಗೂ ಕಡ್ಡಾಯವಾಗಿಆರ್‌ಟಿಪಿಸಿಆರ್‌ ಪರೀಕ್ಷೆ ಮಾಡುವಂತೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಡುವಆರ್‌ಟಿಪಿಸಿಆರ್‌ ಪರೀಕ್ಷೆ ವರದಿ ನೆಗೆಟಿವ್ ಬಂದರೆ ಅವರನ್ನು ಮನೆಗೆ ಕಳುಹಿಸಿ, 7 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT