ಬೆಂಗಳೂರು: ರಾಜ್ಯದಲ್ಲಿ ಮತ್ತೆ 7,710 ಮಂದಿ ಕೋವಿಡ್ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 5.48 ಲಕ್ಷಕ್ಕೆ ಏರಿಕೆಯಾಗಿದೆ.

24 ಗಂಟೆಗಳ ಅವಧಿಯಲ್ಲಿ 8 ಸಾವಿರದಿಂದ 9 ಸಾವಿರದ ಗಡಿ ದಾಟುತ್ತಿದ್ದ ಪ್ರಕರಣಗಳ ಸಂಖ್ಯೆ ಇಳಿಮುಖ ಕಂಡಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಪರೀಕ್ಷೆಗಳ ಸಂಖ್ಯೆ ಕೂಡ ಕಡಿಮೆ ಮಾಡಲಾಗಿದ್ದು, ಒಂದು ದಿನದ ಅವಧಿಯಲ್ಲಿ 64 ಸಾವಿರ ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಈವರೆಗೆ 44.59 ಲಕ್ಷ ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕೊರೊನಾ ಸೋಂಕಿತರಲ್ಲಿ ಮತ್ತೆ 65 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಕೋವಿಡ್‌ಗೆ ಸಾವಿಗೀಡಾದವರ ಸಂಖ್ಯೆ 8,331ಕ್ಕೆ ಏರಿಕೆಯಾಗಿದೆ.

ಕೋವಿಡ್ ಪೀಡಿತರಲ್ಲಿ ಮತ್ತೆ 6,748 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 4.44 ಲಕ್ಷಕ್ಕೆ ಏರಿಕೆಯಾಗಿದೆ. ಸದ್ಯ 95 ಸಾವಿರ ಸೋಂಕಿತರು ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವ ರೋಗಿಗಳ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ಸದ್ಯ ಸೋಂಕಿತರಲ್ಲಿ 827 ಮಂದಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಗರಿಷ್ಠ: ಬೆಂಗಳೂರಿನಲ್ಲಿ ಹೊಸದಾಗಿ 4,192 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದು ಈವರೆಗೆ ವರದಿಯಾದ ಗರಿಷ್ಠ ಪ್ರಕರಣಗಳಾಗಿದ್ದು, ಸೋಂಕಿತರ ಸಂಖ್ಯೆ 2.08 ಲಕ್ಷಕ್ಕೆ ತಲುಪಿದೆ. ಮೈಸೂರಿನಲ್ಲಿ ಮತ್ತೆ 481 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31 ಸಾವಿರ ದಾಟಿದೆ. ಹಾಸನ (407), ದಕ್ಷಿಣ ಕನ್ನಡ (266), ಧಾರವಾಡ (264), ಶಿವಮೊಗ್ಗ (234) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ದಿನ 24/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommaihttps://t.co/U8xkJgjKU5 pic.twitter.com/6mU2yvMGb9

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.