ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ಸೋಂಕಿನಲ್ಲಿ ಭಾರತವನ್ನು ವಿಶ್ವದ ನಂಬರ್ 1 ದೇಶವನ್ನಾಗಿಸುವ ಧಾವಂತದಲ್ಲಿದ್ದರೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರುಕರ್ನಾಟಕವನ್ನು ದೇಶದ ನಂಬರ್ 1 ಮಾಡುವ ಉತ್ಸಾಹದಲ್ಲಿದ್ದಾರೆ. ಈ ಇಬ್ಬರು ನಾಯಕರು ಕೊರೊನಾಕ್ಕಿಂತಲೂ ಅಪಾಯಕಾರಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ರಾಜ್ಯದಲ್ಲಿ ಪ್ರತಿದಿನ ಸರಾಸರಿ 10,000 ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಸರಾಸರಿ 100 ಜನ ಸಾಯುತ್ತಿದ್ದಾರೆ. ಇಲ್ಲಿಯವರೆಗೆ 6.79 ಲಕ್ಷ ಜನರಿಗೆ ಸೋಂಕು ತಗಲಿದ್ದು, 1.17 ಲಕ್ಷಕ್ಕೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಕ್ಕೆ ಕೊರೊನಾ ಸೋಂಕು ಬಡಿದಂತಹ ಪರಿಸ್ಥಿತಿ ಇದೆ ಎಂದು ಅವರು ಹೇಳಿದ್ದಾರೆ.

ಕೊರೊನಾ ಉಲ್ಭಣಗೊಳ್ಳಲು ಜನರ ನಿರ್ಲಕ್ಷ್ಯ ಕಾರಣ ಎಂದು ಹೇಳುತ್ತಿರುವ ಯಡಿಯೂರಪ್ಪ,
ಕೊರೊನಾ ನಿಯಂತ್ರಣದಲ್ಲಿನ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಆಡಳಿತ ವೈಫಲ್ಯದಿಂದಾಗಿ ಖಾಲಿಯಾಗಿರುವ ಖಜಾನೆ ತುಂಬಿಸಲು ಮದ್ಯದಂಗಡಿಯಿಂದ ಮಾಲ್ವರೆಗೆ, ದೇವಸ್ಥಾನಗಳಿಂದ ಹೊಟೇಲ್ಗಳವರೆಗೆ ಎಲ್ಲವನ್ನು ತೆರೆದಿಟ್ಟು ಜನರನ್ನು ಕೈಬೀಸಿ ಕರೆಯುತ್ತಿರುವ ರಾಜ್ಯ ಸರ್ಕಾರ, ಕೊರೊನಾ ಉಲ್ಭಣಗೊಳ್ಳಲು ಜನರೇ ಕಾರಣ ಎಂದು ದೂಷಿಸುತ್ತಿರುವುದು ಜನರಿಗೆ ಬಗೆಯುತ್ತಿರುವ ದ್ರೋಹ ಎಂದು ಸಿದ್ದರಾಮಯ್ಯ ದೂರಿದ್ದಾರೆ.

‘ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರವೇ ಸೋಂಕು ಹೆಚ್ಚಾಗಲು ಕಾರಣ. ಕೊರೊನಾ ನಿಯಂತ್ರಣವು ಜನರ ಸೇವೆ ಮಾಡಲು ಅವಕಾಶ ಎಂದು ಭಾವಿಸದ ಯಡಿಯೂರಪ್ಪ
ನೇತೃತ್ವದ ಸಚಿವ ಸಂಪುಟದ ಸದಸ್ಯರು ಇದು ದುಡ್ಡು ಮಾಡಲು ಒದಗಿಬಂದ ಸುವರ್ಣಾವಕಾಶ ಎಂದು ತಿಳಿದದ್ದೇ ಇಂದಿನ ದುಸ್ಥಿತಿಗೆ ಕಾರಣ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಸತ್ಯನಿಷ್ಠವಾಗಿ ಜನರ ಮುಂದಿರುವ ಧೈರ್ಯ ಮುಖ್ಯಮಂತ್ರಿಗೆ ಇದೆಯೇ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಾಲಾರಂಭ ಬೇಡ

‘ಮಕ್ಕಳ ತಂದೆ-ತಾಯಿಗಳು ಒಪ್ಪಲಿ ಬಿಡಲಿ. ಯಾವುದೇ ಕಾರಣಕ್ಕೂ ಶಾಲೆ, ಕಾಲೇಜುಗಳನ್ನು ಪುನರಾರಂಭಿಸಬಾರದು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಎಲ್ಲ ವಿದ್ಯಾರ್ಥಿಗಳಿಗೆ ಈ ವರ್ಷ ಮುಂದಿನ ತರಗತಿಗೆ ಬಡ್ತಿ ಕೊಡಲಿ. ಇದರಿಂದ ಏನೂ ಕಳೆದುಕೊಳ್ಳುವುದಿಲ್ಲ, ಆಕಾಶ ಏನು ಬೀಳುವುದಿಲ್ಲ. ಬೇಕಿದ್ದರೆ ಆನ್ಲೈನ್ನಲ್ಲಿ ಪಾಠಗಳನ್ನು ಮಾಡಲಿ. ಶಾಲೆಗಳನ್ನು ತೆರೆಯಬಾರದು’ ಎಂದು ಅವರು ಪ್ರತಿಪಾದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.