ಮಂಗಳೂರು: ಪಿಎಚ್.ಡಿ ವಿದ್ಯಾರ್ಥಿನಿಯಿಂದ ಲಂಚ ಪಡೆದಿದ್ದ ಮಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ರವಿಶಂಕರ್ ಅವರಿಗೆ, ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಪಿಎಚ್.ಡಿ ಪ್ರಬಂಧ ಅಂಗೀಕರಿಸಲು ಮೈಸೂರಿನಿಂದ ಬರುವ ಬಾಹ್ಯ ಪರಿವೀಕ್ಷಕರ ಖರ್ಚಿಗೆ ಹಣ ಕೊಡಬೇಕು ಎಂದು ಡಾ.ಅನಿತಾ ಅವರು, ವಿದ್ಯಾರ್ಥಿನಿಗೆ ಬೇಡಿಕೆ ಇಟ್ಟಿದ್ದರು. ಮೊದಲು ₹10 ಸಾವಿರ, ನಂತರ ₹4 ಸಾವಿರ ಮತ್ತು ಆಮೇಲೆ ₹16,800ಕ್ಕೆ ಬೇಡಿಕೆ ಇಟ್ಟಿದ್ದರು. ಆ ಪೈಕಿ 2012ರ ಡಿಸೆಂಬರ್ 4ರಂದು ಮುಂಗಡ ₹5 ಸಾವಿರ ಪಡೆಯುತ್ತಿದ್ದಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಉಮೇಶ್ ಜಿ. ಶೇಟ್ ಹಾಗೂ ಸಿಬ್ಬಂದಿ, ಡಾ.ಅನಿತಾ ಅವರನ್ನು ಬಂಧಿಸಿದ್ದರು.

ಲೋಕಾಯುಕ್ತ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 7ರ ಅಡಿ 2 ವರ್ಷ ಸಾದಾ ಶಿಕ್ಷೆ ಮತ್ತು ₹15 ಸಾವಿರ ದಂಡ, ಕಲಂ 13 (1)(ಡಿ) ಅಡಿ 3 ವರ್ಷ ಸಾದಾ ಶಿಕ್ಷೆ ಮತ್ತು ₹15 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ವಿಫಲರಾದರೆ ತಲಾ ಒಂದು ತಿಂಗಳು ಸಾದಾ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ. ಲೋಕಾಯುಕ್ತದ ಪರ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.