ಬುಧವಾರ, ಸೆಪ್ಟೆಂಬರ್ 28, 2022
27 °C

ಸರ್ಕಾರಿ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ: ಹೈಕೋರ್ಟ್‌ ಕಳವಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ದಿನೇ ದಿನೇ ವ್ಯಾಪಕವಾಗುತ್ತಿದ್ದು, ದುಡ್ಡು ಕೊಡದೇ ಯಾವ ಫೈಲೂ ಮುಂದಕ್ಕೆ ಚಲಿಸುವುದಿಲ್ಲ ಎಂಬ ದುಃಸ್ಥಿತಿ ನಿರ್ಮಾಣವಾಗಿದೆ’ ಎಂದು ಹೈಕೋರ್ಟ್‌ ಕಳವಳ ವ್ಯಕ್ತಪಡಿಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸಹಾಯಕ ಎಂಜಿನಿಯರ್‌ ಬಿ.ಟಿ.ರಾಜು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಆರೋಪಿ ರಾಜು ವಿರುದ್ಧ ಬಲವಾದ ಸಾಕ್ಷ್ಯಗಳಿರುವ ಕಾರಣ ಜಾಮೀನು ನೀಡಲು ಆಗದು’ ಎಂದು ವಜಾಗೊಳಿಸಿದೆ.

ಬಿ.ಟಿ.ರಾಜು, ಅನುಕೂಲಕರ ಆದೇಶ ನೀಡಲು ಮಂಜುನಾಥ್‌ ಅವರಿಗೆ ₹ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಫಿರ್ಯಾದುದಾರ ಮಂಜುನಾಥ್‌ ಚೌಕಾಶಿ ನಡೆಸಿದ ನಂತರ ₹ 60 ಲಕ್ಷಕ್ಕೆ ಕೆಲಸ ಮಾಡಲು ಒಪ್ಪಿಕೊಂಡಿದ್ದರು. 2022ರ ಜೂನ್‌ 7ರಂದು ಲಂಚದ ಮೊತ್ತದಲ್ಲಿ ₹ 5 ಲಕ್ಷ ಮುಂಗಡ ಪಡೆದಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು