ರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ

ಬೆಂಗಳೂರು: ನೂತನ ರಾಷ್ಟ್ರಪತಿ ಆಯ್ಕೆಗಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಧಾನಸೌಧದ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮತದಾನ ಆರಂಭವಾಗಿದೆ.
ರಾಜ್ಯ ವಿಧಾನಸಭೆಯ 224 ಚುನಾಯಿತ ಸದಸ್ಯರು, ಮೈಸೂರು- ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ. ಶ್ರೀನಿವಾಸ ಪ್ರಸಾದ್ ಮತ್ತು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರು ವಿಧಾನಸೌಧದ ಮತಗಟ್ಟೆಯಲ್ಲಿ ಮತ ಚಲಾಯಿಸಲಿದ್ದಾರೆ.
ಸಚಿವರು ಸೇರಿದಂತೆ ಬಿಜೆಪಿಯ ಹಲವು ಶಾಸಕರು ಮತಗಟ್ಟೆ ಬಳಿ ಬಂದಿದ್ದಾರೆ. ಸಂಜೆ 5 ಗಂಟೆಯವರೆಗೂ ಮತದಾನಕ್ಕೆ ಅವಕಾಶವಿದೆ.
ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಮತದಾನಕ್ಕೆ ಸಜ್ಜು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.