ಗುರುವಾರ , ನವೆಂಬರ್ 26, 2020
21 °C

ವಿಧಾನಪರಿಷತ್‌ ಚುನಾವಣೆ: 4 ಕ್ಷೇತ್ರಗಳ ಮತ ಎಣಿಕೆ ನ.10ಕ್ಕೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳ ಮತ ಎಣಿಕೆಯನ್ನು ನ.2ರ ಬದಲು ನ.10ರಂದು ನಡೆಸುವಂತೆ ಕೇಂದ್ರ ಚುನಾವಣಾ ಆಯೋಗ ಶನಿವಾರ ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ.

ಈ ಕ್ಷೇತ್ರಗಳಿಗೆ ಅ.28ರಂದು ಮತದಾನ ನಡೆದಿದ್ದು, ನ.2ರಂದು ಮತ ಎಣಿಕೆ ನಡೆಯಬೇಕಿತ್ತು. ಆಯಾ ಚುನಾವಣಾಧಿಕಾರಿಗಳು ಸಿದ್ಧತೆಯ್ನೂ ಮಾಡಿಕೊಂಡಿದ್ದರು.

ಶಿರಾ ಮತ್ತು ಆರ್‌.ಆರ್. ನಗರ ವಿಧಾನಸಭಾ ಕ್ಷೇತ್ರಗಳಿಗೆ ನ.3ರಂದು ಮತದಾನ ನಡೆಯಲಿದೆ. ಈ ಕಾರಣಕ್ಕಾಗಿ ಪರಿಷತ್ ಚುನಾವಣೆಯ ಮತ ಎಣಿಕೆ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು