ಗುರುವಾರ , ಮೇ 6, 2021
23 °C
ಮಗಳ ಮೇಲೆ ನಿರಂತರ ಅತ್ಯಾಚಾರ

ತಂದೆಗೆ 20 ವರ್ಷ ಕಠಿಣ ಜೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ತಂದೆಗೆ ವಿಶೇಷ ಪೋಕ್ಸೊ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ.

ಸಂತ್ರಸ್ತ ಬಾಲಕಿಗೆ ಕಾನೂನು ಪ್ರಾಧಿಕಾರದ ವತಿಯಿಂದ ₹ 3 ಲಕ್ಷ ಹಾಗೂ ತಪ್ಪಿತಸ್ಥ ತಂದೆಯಿಂದ ವಸೂಲಿ ಮಾಡಿದ ದಂಡದಲ್ಲಿ ₹ 30 ಸಾವಿರವನ್ನು ಪರಿಹಾರ ರೂಪದಲ್ಲಿ ನೀಡುವಂತೆ ನ್ಯಾಯಾಧೀಶ ಬನ್ನಿಕಟ್ಟಿ ಆರ್‌.ಹನುಮಂತಪ್ಪ ಆದೇಶದಲ್ಲಿ ಸೂಚಿಸಿದ್ದಾರೆ.

ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮವೊಂದರ ವ್ಯಕ್ತಿ ಶಿಕ್ಷೆಗೆ ಗುರಿಯಾದವನು. ಏಳು ವರ್ಷಗಳ ಹಿಂದೆ ಪತ್ನಿ ಮೃತಪಟ್ಟಿದ್ದರಿಂದ ಮಗಳೊಂದಿಗೆ ವಾಸವಾಗಿದ್ದನು. 16 ವರ್ಷದ ಮಗಳಿಗೆ ಗರ್ಭಪಾತವಾದ ಬಳಿಕ ಭ್ರೂಣವನ್ನು ಹೂತು ನಾಶಪಡಿಸಲು ಪ್ರಯತ್ನಿಸಿದ್ದನು ಎಂದು ಸರ್ಕಾರದ ಪರವಾಗಿ ವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಜಯರಾಮ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು