ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

24 ದಿನಗಳಿಂದ ತಲೆಮರೆಸಿಕೊಂಡಿರುವ ಇನ್‌ಸ್ಪೆಕ್ಟರ್ ಯಶವಂತ್
Last Updated 31 ಜನವರಿ 2021, 18:16 IST
ಅಕ್ಷರ ಗಾತ್ರ

ಬೆಂಗಳೂರು: ಜಮೀನು ಮಾಲೀಕರೊಬ್ಬರಿಂದ ₹ 6 ಲಕ್ಷ ಲಂಚ ಪಡೆದ ಪ್ರಕರಣದಲ್ಲಿ 24 ದಿನಗಳಿಂದ ತಲೆಮರೆಸಿಕೊಂಡಿರುವ ಚಿಕ್ಕಜಾಲ ಠಾಣೆಯ ಇನ್‌ಸ್ಪೆಕ್ಟರ್ ಯಶವಂತ್‌ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಗರದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ರಾಜ್ಯ ಸರ್ಕಾರದ ನಿವೃತ್ತ ಉಪ ಕಾರ್ಯದರ್ಶಿ ಶಿವಶಂಕರ್‌ ಎಂಬುವವರು ಶೆಟ್ಟಿಗೆರೆಯಲ್ಲಿ ಖರೀದಿಸಿರುವ 5 ಎಕರೆ ಜಮೀನಿಗೆ ಸಂಬಂಧಿಸಿದಂತೆ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ಕುರಿತು ಜಮೀನಿನಲ್ಲಿ ಫಲಕ ಅಳವಡಿಸಲು ರಕ್ಷಣೆ ನೀಡುವುದಕ್ಕೆ ₹ 10 ಲಕ್ಷಕ್ಕೆ ಬೇಡಿಕೆ ಇಟ್ಟು, ₹ 6 ಲಕ್ಷ ಪಡೆದ ಆರೋಪ ಯಶವಂತ್‌ ಮೇಲಿದೆ.

ಜನವರಿ 7ರಂದು ಇದೇ ಪ್ರಕರಣದಲ್ಲಿ ಮ್ಯುಟೇಷನ್‌ ಬದಲಾವಣೆಗೆ ₹ 5 ಲಕ್ಷ ಲಂಚ ಪಡೆದ ಕಂದಾಯ ನಿರೀಕ್ಷಕ ಪುಟ್ಟ ಹನುಮಯ್ಯ ಅಲಿಯಾಸ್‌ ಪ್ರವೀಣ್‌ ಮತ್ತು ಇನ್‌ಸ್ಪೆಕ್ಟರ್ ಪರವಾಗಿ ₹ 6 ಲಕ್ಷ ಪಡೆದ ಚಿಕ್ಕಜಾಲ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ರಾಜು ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಬಂಧಿಸಿತ್ತು.

ಜ.7ರಿಂದಲೂ ತಲೆಮರೆಸಿಕೊಂಡಿರುವ ಯಶವಂತ್‌, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗೋಪಾಲಕೃಷ್ಣ ರೈ ಟಿ. ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.

‘ಬಂಧಿತ ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗಿದೆ. ಇನ್‌ಸ್ಪೆಕ್ಟರ್‌ ವಿರುದ್ಧ ಗುರುತರವಾದ ಆರೋಪಗಳಿದ್ದು, ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕಾದ ಅಗತ್ಯ ಕಾಣಿಸುತ್ತಿದೆ. ಈ ಹಂತದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT