ಶುಕ್ರವಾರ, ಜುಲೈ 23, 2021
20 °C

ಯಡಿಯೂರಪ್ಪ ನಿವಾಸಕ್ಕೆ ಬಂದಿದ್ದ ಸ್ವಾಮೀಜಿಗಳಿಗೆ ‘ಕವರ್‌’: ಹರಿದಾಡಿದ ವಿಡಿಯೊ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬೆಂಬಲಿಸಲು ವಿವಿಧ ಕಡೆಗಳಿಂದ ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ಕೊಟ್ಟಿದ್ದ ಸ್ವಾಮೀಜಿಗಳಿಗೆ ‘ಕವರ್‌’ (ಲಕೋಟೆ) ಹಂಚಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘ಮುಖ್ಯಮಂತ್ರಿ ಹುದ್ದೆಯಲ್ಲಿ ಯಡಿಯೂರಪ್ಪ ಅವರನ್ನೇ ಮುಂದುವರಿಸಬೇಕು; ಅವಧಿ ಪೂರ್ಣಗೊಳಿಸುವ ಮುನ್ನವೇ ಅವರನ್ನು ಪದಚ್ಯುತಿಗೊಳಿಸಿದರೆ ಸಹಿಸಲಾಗದು. ಸಾಮೂಹಿಕವಾಗಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ’ ಎಂದು ಅನೇಕ ಮಠಾಧೀಶರು ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಅಧಿಕೃತ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಎರಡು ದಿನಗಳಿಂದ ಮಠಾಧೀಶರ ಸಮಾವೇಶವೇ ನಡೆಯುತ್ತಿದೆ. ಅಲ್ಲಿ ಸೇರಿದ್ದ ಕೆಲವು ಸ್ವಾಮೀಜಿಗಳಿಗೆ ಯಡಿಯೂರಪ್ಪ ಅವರ ಸಮ್ಮುಖದಲ್ಲೇ ಲಕೋಟೆ ಹಂಚುತ್ತಿರುವ ವಿಡಿಯೊ ಹರಿದಾಡುತ್ತಿದೆ. ಆ ಲಕೋಟೆಯಲ್ಲಿ ಏನಿದೆ ಎಂಬ ಕುತೂಹಲಕಾರಿ ಚರ್ಚೆಯೂ ನಡೆಯುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು