Covid-19 Karnataka Update: 1,291 ಹೊಸ ಪ್ರಕರಣ, 15 ಮಂದಿ ಸಾವು

ಬೆಂಗಳೂರು: ರಾಜ್ಯದಾದ್ಯಂತ ಕಳೆದ 24 ಗಂಟೆಗಳಲ್ಲಿ 1,291 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 8,83,899 ಕ್ಕೆ ಏರಿಕೆಯಾಗಿದೆ. ಆ ಪೈಕಿ 11,765 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ 8,47,612 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 24,503 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ 374 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಂಗಳೂರು ನಗರದಲ್ಲಿ 686, ಮಂಡ್ಯ 48, ದಕ್ಷಿಣ ಕನ್ನಡ 48, ಹಾಸನ 41, ತುಮಕೂರು 39, ಉಡುಪಿ 38, ಮೈಸೂರು ಜಿಲ್ಲೆಯಲ್ಲಿ 37 ಹೊಸ ಪ್ರಕರಣಗಳು ದೃಢಪಟ್ಟಿವೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.