ಬುಧವಾರ, ಏಪ್ರಿಲ್ 14, 2021
24 °C
ಸಕ್ರಿಯ ಪ್ರಕರಣಗಳಲ್ಲಿ ರಾಜ್ಯ ದ್ವಿತೀಯ ಸ್ಥಾನ

ದಿನಕ್ಕೆ 5 ಸಾವಿರದತ್ತ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ 24 ಗಂಟೆಗಳಲ್ಲಿ ವರದಿಯಾದ ಕೋವಿಡ್‌ ಪ್ರಕರಣಗಳ ಸಂಖ್ಯೆ 5 ಸಾವಿರ (4,991) ಸಮೀಪಿಸಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 34 ಸಾವಿರಕ್ಕೆ ಏರಿಕೆಯಾಗಿದೆ.

ಸತತ ಮೂರನೇ ದಿನ ಕೂಡ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಈ ಅವಧಿಯಲ್ಲಿ 13,450 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳ ಕಂಡಿದೆ. ಪರಿಣಾಮ ದೇಶದಲ್ಲಿ ಅಧಿಕ ಸಕ್ರಿಯ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ದ್ವಿತೀಯ ಸ್ಥಾನಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ ಸೋಂಕು ದೃಢ ಪ್ರಮಾಣ ಶೇ 4.19ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿ ಕೋವಿಡ್ ಮತ್ತಷ್ಟು ಏರಿಕೆ ಕಂಡಿದ್ದು, ಹೊಸದಾಗಿ 3,509 ಪ್ರಕರಣಗಳು ದೃಢಪಟ್ಟಿವೆ. ಮೈಸೂರು (174), ತುಮಕೂರು (142), ಬೀದರ್ (126), ಕಲಬುರ್ಗಿ (105), ದಕ್ಷಿಣ ಕನ್ನಡ (105), ಹಾಸನ (102) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ವರದಿಯಾಗಿವೆ. ಏರಿಕೆ ಕಂಡಿದ್ದ ಕೋವಿಡ್ ಮರಣ ಪ್ರಕರಣಗಳ ಸಂಖ್ಯೆ 6ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 5 ಮಂದಿ ಹಾಗೂ ಕಲಬುರ್ಗಿಯಲ್ಲಿ ಒಬ್ಬರು ಮೃತಪಟ್ಟಿರುವುದು ಖಚಿತಪಟ್ಟಿದೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,591ಕ್ಕೆ ತಲುಪಿದೆ.

ಸದ್ಯ 269 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ. ಕೋವಿಡ್ ಪರೀಕ್ಷೆಗಳ ಸಂಖ್ಯೆ ಕೂಡ ಏರಿಕೆ ಕಂಡಿದೆ. ಒಂದು ದಿನದ ಅವಧಿಯಲ್ಲಿ 1.18 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕೊರೊನಾ ಸೋಂಕಿತರಲ್ಲಿ 1,631 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9.59 ಲಕ್ಷ ದಾಟಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು