ನಮ್ಮ ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ @BJP4India ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟಿನ ಆದೇಶವನ್ನು ನಾಡಿನ ನೊಂದ ಜನರೆಲ್ಲರ ಪರವಾಗಿ ನಾನು ಸ್ವಾಗತಿಸುತ್ತೇನೆ. 1/4#COVID19
ಕರ್ನಾಟಕಕ್ಕೆ ನಿತ್ಯ 1600 - 1700 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯವಿದೆ, ಆದರೆ @PMOIndia ನಿಗದಿ ಮಾಡಿದ್ದು 965 ಮೆಟ್ರಿಕ್ ಟನ್ ಮಾತ್ರ. ಇದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಳ್ಳಲಿದ್ದ ರಾಜ್ಯದ ಸಹಸ್ರಾರು ರೋಗಿಗಳ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ. 2/4#COVID19
ಸುಪ್ರೀಂ ಕೋರ್ಟ್ ತಪರಾಕಿಯಿಂದ @PMOIndia ಈಗಲಾದರೂ ಬುದ್ದಿ ಕಲಿಯಲಿ. ಜನರ ಪ್ರಾಣದ ಜೊತೆ ಚೆಲ್ಲಾಟವಾಡುವ ಕ್ರೌರ್ಯವನ್ನು ನಿಲ್ಲಿಸಲಿ. ಕರ್ನಾಟಕಕ್ಕೆ ಅಗತ್ಯವಿರುವಷ್ಟು ಪ್ರಮಾಣದ ಆಮ್ಲಜನಕವನ್ನು ತಕ್ಷಣ ಪೂರೈಸಲಿ. 3/4#COVID19
ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ಸಂಪೂರ್ಣ ಇಲ್ಲಿಯೇ ಬಳಕೆ ಮಾಡಿಕೊಳ್ಳಲು ಅವಕಾಶ ನೀಡುವಂತೆ ಹಾಗೂ ರಾಜ್ಯಕ್ಕೆ ನೀಡುವ ಆಕ್ಸಿಜನ್ ಪ್ರಮಾಣವನ್ನು 1500 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ @BSYBJP ಹಾಗೂ @BJP4Karnataka ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸುತ್ತೇನೆ. 4/4#COVID19