ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್ ವಲಸಿಗರು: 64 ಮಂದಿ ಪರೀಕ್ಷಾ ವರದಿ ಬಾಕಿ

Last Updated 3 ಜನವರಿ 2021, 15:53 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಕ್ಕೆ ಬ್ರಿಟನ್‌ನಿಂದ ಬಂದವರಲ್ಲಿ ಈವರೆಗೆ 2,173 ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಅವರಲ್ಲಿ ಇನ್ನೂ 64 ಮಂದಿಯ ವರದಿಗಾಗಿ ಎದುರು ನೋಡುತ್ತಿದ್ದಾರೆ.

ಪರೀಕ್ಷೆಗೆ ಒಳಪಟ್ಟ ಬ್ರಿಟನ್ ಪ್ರಯಾಣಿಕರಲ್ಲಿ 2,075 ಮಂದಿ ಸೋಂಕಿತರಾಗಿಲ್ಲ ಎಂಬುದು ದೃಢಪಟ್ಟಿದೆ. ಈವರೆಗೆ 34 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ರಾಜ್ಯಕ್ಕೆ ನ.25 ರ ಬಳಿಕ 5 ಸಾವಿರಕ್ಕೂ ಅಧಿಕ ಮಂದಿ ಬ್ರಿಟನ್‌ನಿಂದ ಬಂದಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 810 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.21 ಲಕ್ಷ ದಾಟಿದೆ. ಸೋಂಕಿತರಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,107ಕ್ಕೆ ತಲುಪಿದೆ. ಒಂದೇ ದಿನ 1.12 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 1.43 ಕೋಟಿ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಕೋವಿಡ್ ಪೀಡಿತರಲ್ಲಿ ಮತ್ತೆ 743 ಮಂದಿ ಗುಣಮುಖರಾಗಿದ್ದು, ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 8.98 ಲಕ್ಷಕ್ಕೆ ತಲುಪಿದೆ.

ಸೋಂಕಿತರಲ್ಲಿ ಸದ್ಯ 10,893 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 186 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ. ಕಳೆದ 14 ದಿನಗಳ ಅವಧಿಯಲ್ಲಿ 64 ಸಾವಿರ ನೇರ ಸಂಪರ್ಕಿತರು ಹಾಗೂ 73 ಸಾವಿರ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ 464 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.89 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 43 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 52,541ಕ್ಕೆ ತಲುಪಿದೆ. ಚಿಕ್ಕಬಳ್ಳಾಪುರದಲ್ಲಿ 32, ದಕ್ಷಿಣ ಕನ್ನಡದಲ್ಲಿ 30, ತುಮಕೂರಿನಲ್ಲಿ 20, ಉಡುಪಿಯಲ್ಲಿ 19 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 4, ಮೈಸೂರಿನಲ್ಲಿ 2, ತುಮಕೂರು ಮತ್ತು ಕಲಬುರ್ಗಿಯಲ್ಲಿ ತಲಾ ಒಂದು ಮರಣ ಪ್ರಕರಣ ಹೊಸದಾಗಿ ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT