ಬೆಂಗಳೂರು: ರಾಜ್ಯದಲ್ಲಿ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದವರಲ್ಲಿ 1,72,964 ಮಂದಿ ಎರಡನೇ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಈವರೆಗೆ 4.39 ಲಕ್ಷ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯಲು ಬುಧವಾರ 63,091 ಮಂದಿಯನ್ನು ಗುರುತಿಸಲಾಗಿತ್ತು. ಅವರಲ್ಲಿ 26,842 (ಶೇ 46ರಷ್ಟು) ಮಂದಿ ಹಾಜರಾಗಿ ಲಸಿಕೆ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ಲಸಿಕೆ ವಿತರಣೆ ಪ್ರಾರಂಭವಾದಾಗಿನಿಂದ ಈವರೆಗೆ ನಿಗದಿಪಡಿಸಲಾಗಿದ್ದ 7,28,349 ಆರೋಗ್ಯ ಕಾರ್ಯಕರ್ತರಲ್ಲಿ ಶೇ 60 ರಷ್ಟು ಗುರಿ ಸಾಧ್ಯವಾಗಿದೆ. 2,91,037 ಮುಂಚೂಣಿ ಯೋಧರನ್ನು ಈವರೆಗೆ ಲಸಿಕೆ ಪಡೆಯಲು ಗುರುತಿಸಲಾಗಿತ್ತು. ಅವರಲ್ಲಿ 1,45,174 ಮಂದಿ ಹಾಜರಾಗಿ ಲಸಿಕೆ ಪಡೆದುಕೊಂಡಿದ್ದಾರೆ. ಇದರಿಂದ ಶೇ 50 ರಷ್ಟು ಗುರಿ ಸಾಧ್ಯವಾಗಿದೆ.

6 ಮಂದಿ ಸಾವು: ರಾಜ್ಯದಲ್ಲಿ ಹೊಸದಾಗಿ 334 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.49 ಲಕ್ಷ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ ನಾಲ್ವರು ಹಾಗೂ ಮೈಸೂರು, ತುಮಕೂರಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,309ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 313 ಮಂದಿ ಗುಣಮುಖರಾಗಿದ್ದಾರೆ.

ಒಂದು ದಿನದ ಅವಧಿಯಲ್ಲಿ 63 ಸಾವಿರ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜ್ಯದ 26 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ ದಾಟಿಲ್ಲ. ಬೆಂಗಳೂರಿನಲ್ಲಿ 174 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.04 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 25 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 53,992ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.