ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಸಕ್ರಿಯ ಪ್ರಕರಣ 15 ಸಾವಿರಕ್ಕೆ ಇಳಿಕೆ

Last Updated 15 ಡಿಸೆಂಬರ್ 2020, 21:49 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಹೊಸ ಪ್ರಕರಣಗಳ ಇಳಿಕೆ ಹಾಗೂ ಗುಣಮುಖರ ಸಂಖ್ಯೆ ಏರಿಕೆಯಿಂದಾಗಿ ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆ ಕಂಡಿದ್ದು, ಸದ್ಯ 15,645 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕಳೆದ ತಿಂಗಳು ಈ ವೇಳೆ‌ರಾಜ್ಯದಲ್ಲಿ 27 ಸಾವಿರ ಸಕ್ರಿಯ ಪ್ರಕರಣಗಳಿದ್ದವು. ಹೊಸದಾಗಿ 1,185 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.03 ಲಕ್ಷ ದಾಟಿದೆ. ಈ ತಿಂಗಳು 15 ದಿನಗಳ ಅವಧಿಯಲ್ಲಿ 18,528 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 1,235 ಮಂದಿ ಕೋವಿಡ್ ಪೀಡಿತರಾಗಿದ್ದಾರೆ.

ಸೋಂಕಿತರಲ್ಲಿ 11 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಕೋವಿಡ್‌ಗೆ ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,965ಕ್ಕೆ ತಲುಪಿದೆ. ಒಂದೇ ದಿನ 89 ಸಾವಿರ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 1.25 ಕೋಟಿ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಸೋಂಕಿತರಲ್ಲಿ 1,594 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 8.75 ಲಕ್ಷಕ್ಕೆ ತಲುಪಿದೆ. ಸದ್ಯ 253 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ 673 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.79 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 35 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 51,504ಕ್ಕೆ ತಲುಪಿದೆ. ಚಿಕ್ಕಬಳ್ಳಾಪುರದಲ್ಲಿ 56, ತುಮಕೂರಿನಲ್ಲಿ 44, ದಕ್ಷಿಣ ಕನ್ನಡದಲ್ಲಿ 38, ಹಾಸನದಲ್ಲಿ 27 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT