ಗುರುವಾರ , ಏಪ್ರಿಲ್ 22, 2021
30 °C

ಕೋವಿಡ್: ಐಸಿಯು ದಾಖಲಾತಿ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಪೀಡಿತರಲ್ಲಿ ಶನಿವಾರ ಒಂದೇ ದಿನ 58 ಮಂದಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗಿದ್ದಾರೆ. ಇದರಿಂದಾಗಿ ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಸಂಖ್ಯೆ 327ಕ್ಕೆ ಏರಿಕೆಯಾಗಿದೆ.

ಸತತ ನಾಲ್ಕನೇ ದಿನ ಕೂಡ ರಾಜ್ಯದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. 24 ಗಂಟೆಗಳ ಅವಧಿಯಲ್ಲಿ 4,373 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಈವರೆಗೆ ಸೋಂಕಿತರಾದವರ ಸಂಖ್ಯೆ 10.10 ಲಕ್ಷ ದಾಟಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, 5 ಜಿಲ್ಲೆಗಳಲ್ಲಿ ಮೂರಂಕಿ ತಲುಪಿದೆ. ಬೆಂಗಳೂರಿನಲ್ಲಿ ಮತ್ತೆ 3,002 ಮಂದಿ ಸೋಂಕಿತರಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.44 ಲಕ್ಷ ದಾಟಿದೆ. ಬೀದರ್ (172), ಮೈಸೂರು (171), ತುಮಕೂರು (167), ಕಲಬುರ್ಗಿ (151) ಜಿಲ್ಲೆಯಲ್ಲಿ ಅಧಿಕ ‍ಪ್ರಕರಣಗಳು ವರದಿಯಾಗಿವೆ.

ಕಳೆದೊಂದು ತಿಂಗಳಿನಿಂದ ಹೊಸ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 36,614ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 19 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ 6 ಮಂದಿ, ಹಾಸನದಲ್ಲಿ 3 ಮಂದಿ, ಮಂಡ್ಯದಲ್ಲಿ ಇಬ್ಬರು, ತುಮಕೂರು, ಕಲಬುರ್ಗಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಈವರೆಗೆ ಮೃತಪಟ್ಟವರ ಸಂಖ್ಯೆ 12,610ಕ್ಕೆ ತಲುಪಿದೆ.

ಕೋವಿಡ್ ಪರೀಕ್ಷೆಗಳ ಸಂಖ್ಯೆ ಕೂಡ ಏರಿಕೆ ಕಂಡಿದೆ. ಒಂದು ದಿನದ ಅವಧಿಯಲ್ಲಿ 1.23 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕಳೆದ ಎರಡು ತಿಂಗಳಲ್ಲಿ ನಡೆಸಲಾದ ಗರಿಷ್ಠ ಪರೀಕ್ಷೆಗಳು ಇವಾಗಿವೆ. ಕೊರೊನಾ ಸೋಂಕಿತರಲ್ಲಿ 1,959 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9.61 ಲಕ್ಷ ದಾಟಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು