ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಕೋವಿಡ್‌ ದೃಢ ಪ್ರಮಾಣ ಶೇ 1.94ಕ್ಕೆ ಏರಿಕೆ

Last Updated 5 ಜುಲೈ 2021, 21:27 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ ತೆರವುಗೊಳಿಸಿರುವ ಬೆನ್ನಲ್ಲೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರುಮುಖವಾಗಿದೆ. ಸೋಮವಾರ2,848 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಹೀಗಾಗಿ ಸೋಂಕು ದೃಢ ಪ್ರಮಾಣವು ಶೇ1.94ಕ್ಕೆ ಏರಿದೆ.

ಹಿಂದಿನ 24 ಗಂಟೆಗಳಲ್ಲಿ 67 ಮಂದಿ ಸಾವಿಗೀಡಾಗಿದ್ದಾರೆ. ಮರಣ ಪ್ರಮಾಣ ದರವು ಶೇ2.35ಕ್ಕೆ ತಗ್ಗಿದೆ. ರಾಜ್ಯದಲ್ಲಿ ಈವರೆಗೆ 35,434 ಮಂದಿ ಕೋವಿಡ್‌ನಿಂದ ಅಸುನೀಗಿದ್ದಾರೆ.

ಸೋಮವಾರ 5,631 ಜನ ಚೇತರಿಸಿಕೊಂಡಿದ್ದು, ಗುಣಮುಖರ ಒಟ್ಟು ಸಂಖ್ಯೆಯು 27.79 ಲಕ್ಷಕ್ಕೆ ಹೆಚ್ಚಿದೆ.

ಬೆಂಗಳೂರಿನಲ್ಲಿ ಮತ್ತೆ ಹೊಸ ಪ್ರಕರಣಗಳ ಸಂಖ್ಯೆ 500ರ ಗಡಿ ದಾಟಿದೆ. ಒಂದು ದಿನದಲ್ಲಿ 520 ಮಂದಿ ರೋಗದಿಂದ ಬಾಧಿತರಾಗಿದ್ದಾರೆ. ದಕ್ಷಿಣ ಕನ್ನಡ (265), ಹಾಸನ (383), ಮೈಸೂರು (371) ಜಿಲ್ಲೆಗಳಲ್ಲೂ ಅಧಿಕ ಪ್ರಕರಣಗಳು ವರದಿಯಾಗಿವೆ.14 ಜಿಲ್ಲೆಗಳಲ್ಲಿ ಪ್ರಕರಣಗಳು ಎರಡಂಕಿಯಷ್ಟಿವೆ. ಏಳು ಜಿಲ್ಲೆಗಳಲ್ಲಿ ಒಂದಂಕಿಗೆ ತಗ್ಗಿದೆ. ರಾಜ್ಯದಲ್ಲಿ ಇದುವರೆಗೆ28.56 ಲಕ್ಷ ಮಂದಿ ಸೋಂಕಿತರಾದಂತಾಗಿದೆ.

ಒಂದು ದಿನದಲ್ಲಿ1.46 ಲಕ್ಷ ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಕ್ರಿಯ ಪ್ರಕರಣಗಳ ರಾಜ್ಯದಲ್ಲಿ ಸದ್ಯ41,996 ಜನ ಆಸ್ಪತ್ರೆ, ಮನೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT