ಗುರುವಾರ , ಆಗಸ್ಟ್ 5, 2021
29 °C

Covid-19 Karnataka Update: ಒಂದೇ ದಿನ 6,455 ಜನ ಗುಣಮುಖ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

DH Photo

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ನಿನ್ನೆಗಿಂತ ಕೊಂಚ ಏರಿಕೆ ಕಂಡು ಬಂದಿದ್ದು 24 ಗಂಟೆಗಳ ಅವಧಿಯಲ್ಲಿ 4,436 ಪ್ರಕರಣಗಳು ದೃಢಪಟ್ಟಿವೆ. ನಿನ್ನೆ ಈ ಸಂಖ್ಯೆ 3,708 ಇತ್ತು. ಇದುವರೆಗೆ ಒಟ್ಟು 26,68,705 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 34 ಸಾವಿರದ ಗಡಿ ದಾಟಿದೆ. ಬುಧವಾರ 123 ಮಂದಿ ಸಾವಿಗೀಡಾಗಿರುವ ಕಾರಣ ಒಟ್ಟು ಸಂಖ್ಯೆ 34,287ಕ್ಕೆ ಹೆಚ್ಚಿದೆ. ಮರಣ ಪ್ರಮಾಣ ದರ ಶೇ 2.77ಕ್ಕೆ ತಲುಪಿದೆ.

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಏರಿಕೆ ಕಂಡಿದೆ. ಹೊಸದಾಗಿ 4,436 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಕೋವಿಡ್‌ ಪೀಡಿತರ ಒಟ್ಟು ಸಂಖ್ಯೆ 28.19 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕು ದೃಢ ಪ್ರಮಾಣ ಶೇ 2.59ಕ್ಕೆ ತಲುಪಿದೆ.

ಕೋವಿಡ್‌ ಪೀಡಿತರ ಪೈಕಿ 6,455 ಮಂದಿಯಲ್ಲಿ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 26.68 ಲಕ್ಷಕ್ಕೆ ಹೆಚ್ಚಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1.16 ಲಕ್ಷಕ್ಕೆ ಇಳಿದಿದೆ.

ಇದನ್ನೂ ಓದಿ: ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ

ಬೆಂಗಳೂರು ನಗರ (24), ದಕ್ಷಿಣ ಕನ್ನಡ (13) ಮತ್ತು ಮೈಸೂರು (18) ಬುಧವಾರ ಅಧಿಕ ಮಂದಿ ಅಸುನೀಗಿದ್ದಾರೆ. ಬಳ್ಳಾರಿ(10), ಧಾರವಾಡ(9), ದಾವಣಗೆರೆ (8), ಬೆಳಗಾವಿ(5) ಮಂದಿ ಸತ್ತಿದ್ದಾರೆ.  ಇಂದು ಕೋವಿಡ್‌ನಿಂದ ರಾಜ್ಯದಲ್ಲಿ ಸತ್ತವರ ಸಂಖ್ಯೆ 123.

ಬೆಂಗಳೂರು ನಗರದಲ್ಲಿ ಹೊಸದಾಗಿ 1008 ಮಂದಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡದಲ್ಲಿ 538 ಹೊಸ ಪ್ರಕರಣಗಳು ಕಂಡುಬಂದಿವೆ. ಮೈಸೂರಿನಲ್ಲಿ 499, ಹಾಸನದಲ್ಲಿ 301, ಶಿವಮೊಗ್ಗದಲ್ಲಿ 219 ಹೊಸ ಸಕ್ರಿಯ ಪ್ರಕರಣಗಳು ದಾಖಲಾಗಿವೆ. 27 ಜಿಲ್ಲೆಗಳಲ್ಲಿ 200ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು