ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಒಂದೇ ದಿನ 8,111 ಜನ ಗುಣಮುಖ

ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದ್ದು 24 ಗಂಟೆಗಳ ಅವಧಿಯಲ್ಲಿ 3,708 ಪ್ರಕರಣಗಳು ದೃಢಪಟ್ಟಿದ್ದು 8,111 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 34 ಸಾವಿರದ ಗಡಿ ದಾಟಿದೆ. ಮಂಗಳವಾರ 139 ಮಂದಿ ಸಾವಿಗೀಡಾಗಿರುವ ಕಾರಣ ಒಟ್ಟು ಸಂಖ್ಯೆ 34,164ಕ್ಕೆ ಹೆಚ್ಚಿದೆ. ಮರಣ ಪ್ರಮಾಣ ದರ ಶೇ 3..74ಕ್ಕೆ ತಲುಪಿದೆ.

ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಅಲ್ಪ ಇಳಿಕೆ ಕಂಡಿದೆ. ಹೊಸದಾಗಿ 3,709 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಕೋವಿಡ್‌ ಪೀಡಿತರ ಒಟ್ಟು ಸಂಖ್ಯೆ 28.15 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕು ದೃಢ ಪ್ರಮಾಣ ಶೇ 2.87ಕ್ಕೆ ತಲುಪಿದೆ.

ಕೋವಿಡ್‌ ಪೀಡಿತರ ಪೈಕಿ 8,111 ಮಂದಿಯಲ್ಲಿ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 26.62 ಲಕ್ಷಕ್ಕೆ ಹೆಚ್ಚಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1.18 ಲಕ್ಷಕ್ಕೆ ಇಳಿದಿದೆ.

ಬೆಂಗಳೂರು ನಗರ (26), ದಕ್ಷಿಣ ಕನ್ನಡ (15) ಮತ್ತು ಮೈಸೂರು (11) ಮಂಗಳವಾರ ಅಧಿಕ ಮಂದಿ ಅಸುನೀಗಿದ್ದಾರೆ. ಕೋಲಾರ (9), ಮಂಡ್ಯ(8), ಹಾಸನ, ಧಾರವಾಡ ಮತ್ತು ಬಳ್ಳಾರಿಯಲ್ಲಿ ತಲಾ 7 ಮಂದಿ ಸತ್ತಿದ್ದಾರೆ. ಇಂದು ಕೋವಿಡ್‌ನಿಂದ ರಾಜ್ಯದಲ್ಲಿ ಸತ್ತವರ ಸಂಖ್ಯೆ 139.

ಬೆಂಗಳೂರು ನಗರದಲ್ಲಿ ಹೊಸದಾಗಿ 803 ಮಂದಿಗೆ ಸೋಂಕು ತಗುಲಿದೆ. ಮೈಸೂರಿನಲ್ಲಿ 486ಕ್ಕೆ ಇಳಿಕೆಯಾಗಿದೆ. ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ಕ್ರಮವಾಗಿ 374, 309 ಹೊಸ ಸಕ್ರಿಯ ಪ್ರಕರಣಗಳು ದಾಖಲಾಗಿವೆ. 26 ಜಿಲ್ಲೆಗಳಲ್ಲಿ 200ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT