ಸೋಮವಾರ, ಜುಲೈ 26, 2021
22 °C

Covid-19 Karnataka Update: 3,979 ಹೊಸ ಪ್ರಕರಣ; 9,768 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 3,979 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಕರ್ನಾಟಕದಲ್ಲಿ ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ 28,23,444ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು ಮೃತಪಟ್ಟ 138 ಮಂದಿಯೂ ಸೇರಿದಂತೆ ಈವರೆಗೆ ಒಟ್ಟು 34,425 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸೊಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 3.46ಕ್ಕೆ ಹೆಚ್ಚಾಗಿದೆ. ಹೊಸದಾಗಿ 9,768 ಮಂದಿ ಚೇತರಿಸಿಕೊಂಡಿದ್ದು, ಸದ್ಯ 1,10,523 ಪ್ರಕರಣಗಳು ಸಕ್ರಿಯವಾಗಿವೆ.

ಇದನ್ನೂ ಓದಿ: ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ

ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು (969) ಪ್ರಕರಣಗಳು ವರದಿಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ (498) ಹಾಗೂ ಮೈಸೂರಿನಲ್ಲಿ (404) ನಾಲ್ಕುನೂರಕ್ಕಿಂತ ಹೆಚ್ಚು ಮತ್ತು ಹಾಸನ (336), ಶಿವಮೊಗ್ಗ (206), ಮಂಡ್ಯ (137), ತುಮಕೂರು (128), ಉಡುಪಿ (123), ದಾವಣಗೆರೆ (118), ಕೊಡಗು (115), ಚಿಕ್ಕಮಗಳೂರು (110), ಉತ್ತರ ಕನ್ನಡ (104) ಹಾಗೂ ಕೋಲಾರದಲ್ಲಿ (103) ನೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು