ಬೆಂಗಳೂರು: ರಾಜ್ಯದಲ್ಲಿ 2,743 ಮಂದಿ ಕೋವಿಡ್ ಪೀಡಿತರಾಗಿರುವುದು ಬುಧವಾರ ದೃಢಪಟ್ಟಿದೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 28.62 ಲಕ್ಷ ದಾಟಿದೆ.

ಒಂದು ದಿನದ ಅವಧಿಯಲ್ಲಿ 1.66 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಶೇ 1.64ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ. ಬೆಂಗಳೂರಿನಲ್ಲಿ 611 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500ರ ಗಡಿಯೊಳಗೆ ವರದಿಯಾಗಿವೆ. 14 ಜಿಲ್ಲೆಗಳಲ್ಲಿ ಈ ಸಂಖ್ಯೆ ಎರಡಂಕಿ ಹಾಗೂ 6 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ.

3,081 ಮಂದಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 27.87 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, 39,603 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 20 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಸಾವಿರದ ಗಡಿಯೊಳಗಿದೆ. ಈ ಸಂಖ್ಯೆ ಯಾದಗಿರಿ, ಬೀದರ್ ಹಾಗೂ ರಾಯಚೂರು ಜಿಲ್ಲೆಯಲ್ಲಿ ನೂರರ ಗಡಿಯೊಳಗೆ ಇದೆ.

ಸೋಂಕಿತರಲ್ಲಿ 75 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮರಣ ಪ್ರಮಾಣ ದರವು ಶೇ 2.73 ರಷ್ಟು ವರದಿಯಾಗಿದೆ. ರಾಜ್ಯದ 21 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ಖಚಿತಪಟ್ಟಿವೆ. ದಕ್ಷಿಣ ಕನ್ನಡದಲ್ಲಿ 14 ಹಾಗೂ ಬೆಂಗಳೂರಿನಲ್ಲಿ 12 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35,601ಕ್ಕೆ ತಲುಪಿದೆ.

ಇದನ್ನೂ ಓದಿ:ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.