ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಕೋವಿಡ್‌ ಹೆಚ್ಚಳ: ಮುಖ್ಯಮಂತ್ರಿ ನೇತೃತ್ವದಲ್ಲಿ ನಾಳೆ ಸಭೆ 

Last Updated 14 ಮಾರ್ಚ್ 2021, 8:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ‍್ರಕರಣಗಳ ಸಂಖ್ಯೆ ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ (ಮಾರ್ಚ್‌ 15) ತಜ್ಞರ ಸಭೆ ಕರೆದಿದ್ದಾರೆ.

ವಿಧಾನಸೌಧದಲ್ಲಿ ಸಂಜೆ 5 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌, ಕೋವಿಡ್‌ ತಾಂತ್ರಿಕ ಸಮಿತಿಯ ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕೆಲವು ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚುತ್ತಿದೆ. ಅದನ್ನು ನಿಯಂತ್ರಿಸಲು ಮತ್ತು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತೆ ಕಟ್ಟುನಿಟ್ಟುಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೆ, ಕೆಲವು ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆಯೂ ತೀರ್ಮಾನ ಕೈಗೊಳ್ಳಯವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ಹೇಳಿವೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ‘ಸಭೆಯಲ್ಲಿ ಮುಖ್ಯಮಂತ್ರಿ ಏನು ಹೇಳುತ್ತಾರೊ, ಅದರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು, ಕರ್ಪ್ಯೂ ಅಥವಾ ನೈಟ್‌ ಕರ್ಫ್ಯೂ ಜಾರಿ ಬಗ್ಗೆ ಈವರೆಗೆ ಯಾವುದೇ ಚರ್ಚೆ ನಡೆದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT