ಕೋವಿಡ್–19 ಸೋಂಕು ಹರಡುವಿಕೆ ನಿಯಂತ್ರಿಸುವ ಸಲುವಾಗಿ ರಾಜ್ಯದಲ್ಲಿ ಮೇ 10ರಿಂದ 24ರ ವರೆಗೆ ಲಾಕ್ಡೌನ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಏನೇನು ಸೇವೆಗಳು ಲಭ್ಯವಿರಲಿವೆ, ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶವಿದೆ, ಯಾವುದಕ್ಕೆಲ್ಲ ನಿರ್ಬಂಧ ವಿಧಿಸಲಾಗಿದೆ? ಇಲ್ಲಿದೆ ಪೂರ್ತಿ ಮಾಹಿತಿ:

ಏನೇನು ಇರಲಿವೆ?

* ಈಗಾಗಲೇ ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು ಸಂಚರಿಸಲಿವೆ.

* ಟ್ಯಾಕ್ಸಿ ಮತ್ತು ಆಟೋ ರಿಕ್ಷಾಗಳು ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಸಂಚರಿಸಲು ಅವಕಾಶವಿದೆ.

* ಹೋಟೆಲ್ಗಳು, ರೆಸ್ಟೋರೆಂಟ್ಗಳು ಮತ್ತು ಆಹಾರ ಮಳಿಗೆಗಳು ಪಾರ್ಸೆಲ್ ಹಾಗೂ ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿಸಲಾಗುವುದು.

ಓದಿ:ರಾಜ್ಯದಲ್ಲಿ ಮೇ 10ರಿಂದ 24ರ ವರೆಗೆ ಲಾಕ್ಡೌನ್: ಸಿಎಂ ಯಡಿಯೂರಪ್ಪ ಘೋಷಣೆ

* ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯ ನಿರ್ವಹಿಸಲಿವೆ.

* ಎಲ್ಲ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆಗಳಿಗೆ ಅವಕಾಶ ನೀಡಲಾಗುವುದು.

* ಎಲ್ಲ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು.

* ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ನೀಡಲಾಗುವುದು.

* ಆಹಾರ ಸಾಮಾಗ್ರಿ, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ತೆರೆಯಲು ಅನುಮತಿಸಿದೆ. ಹಾಲಿನ ಬೂತ್ಗಳು ಹಾಗೂ ತಳ್ಳುಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಅವಕಾಶವಿದೆ.

* ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ. ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6ರಿಂದ 10ರ ವರೆಗೆ ತೆರೆಯಲಿವೆ. ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸುವುದನ್ನು ಉತ್ತೇಜಿಸಲಾಗುವುದು.

* ದೂರ ಸಂಪರ್ಕ, ಇಂಟರ್ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯವಾಗಲಿವೆ.

* ಸ್ಥಳದಲ್ಲಿಯೇ ಕಾರ್ಮಿಕರು, ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು, ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸಬಹುದು.

* ಅಗತ್ಯ ವಸ್ತುಗಳ ತಯಾರಿಕಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು.

* ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕಗಳಿಗೆ ಅನುಮತಿ ನೀಡಲಾಗುವುದು.

* ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆಗಳಿಗೆ ಹಾಗೂ ರಸ್ತೆ ಕಾಮಗಾರಿಗಳಿಗೆ ಅನುಮತಿ ನೀಡಲಾಗುವುದು.

* ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ.

* ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರಿಗೆ ಅವಕಾಶ.

ಏನೇನು ಇರಲ್ಲ?

* ಈ ಅವಧಿಯಲ್ಲಿ ಬಸ್, ಮೆಟ್ರೋ ರೈಲು ಸಂಚಾರ ಇರುವುದಿಲ್ಲ.

* ಶಾಲೆ, ಕಾಲೇಜುಗಳು, ಶಿಕ್ಷಣ, ಕೋಚಿಂಗ್ ಸಂಸ್ಥೆಗಳ ತರಗತಿಗಳು ನಡೆಯುವುದಿಲ್ಲ.

* ಸಿನಿಮಾ ಹಾಲ್ಗಳು, ಶಾಪಿಂಗ್ ಮಾಲ್ಗಳು, ಜಿಮ್, ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ, ಈಜುಕೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್ಗಳು, ಕ್ಲಬ್ಗಳು, ಥಿಯೇಟರ್ಗಳು, ಬಾರ್ಗಳು ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ.

* ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳನ್ನು ನಿಷೇಧಿಸಲಾಗಿದೆ.

* ಎಲ್ಲ ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

* ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ.

* ಈ ಮಾರ್ಗಸೂಚಿಯಲ್ಲಿ ಅನುಮತಿಸಿದ ಸಂದರ್ಭಗಳನ್ನು ಹೊರತುಪಡಿಸಿ, ಸರ್ಕಾರಿ ಹಾಗೂ ಖಾಸಗಿ ಬಸ್ಗಳು ಹಾಗೂ ಇತರ ಪ್ರಯಾಣಿಕರ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

* ಐಟಿ ಮತ್ತು ಐಟಿಇಎಸ್ ಕಂಪೆನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿದ್ದು, ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.