ಬೆಂಗಳೂರು: ರಾಜ್ಯದಲ್ಲಿ ಇದೇ 24ರವರೆಗೆ ಲಾಕ್‌ಡೌನ್ ಘೋಷಿಸಿರುವ ಕಾರಣ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ (ಬಿಬಿಎಂಪಿ ಹೊರತುಪಡಿಸಿ) ಇಂದಿರಾ ಕ್ಯಾಂಟೀನ್‌ಗಳಲ್ಲಿ ಬೆಳಗ್ಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಉಚಿತವಾಗಿ ಒದಗಿಸುವಂತೆ ಪೌರಾಡಳಿತ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಲಾಕ್‌ಡೌನ್ ದಿನಗಳಲ್ಲಿ ನಿರಾಶ್ರಿತರಿಗೆ ಆಹಾರ ಕಿಟ್, ಆಹಾರ ಪದಾರ್ಥಗಳ ಕಿಟ್‌ಗಳನ್ನು ನೀಡುವ ಕುರಿತಂತೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ವಿಡಿಯೊ ಸಂವಾದ ನಡೆದಿತ್ತು.

ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರ ದುರ್ಬಲ ವರ್ಗದವರಿಗೆ ಅನುಕೂಲ ಮಾಡಿಕೊಡಲು ಸ್ಥಳೀಯ ಸಂಸ್ಥೆಗಳಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿ ಆಹಾರ ವಿತರಿಸಲು ಈ ವಿಡಿಯೊ ಸಂವಾದದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಅದರಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಆಯುಕ್ತರು ಈ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.