ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 1,805 ಹೊಸ ಪ್ರಕರಣ, 36 ಮಂದಿ ಸಾವು

Last Updated 6 ಆಗಸ್ಟ್ 2021, 13:58 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 1,805 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 36 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,15,317 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 36,741 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 28,54,222 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 24,328 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 441, ದಕ್ಷಿಣ ಕನ್ನಡ 411, ಉಡುಪಿ 153, ಹಾಸನ 103, ಮೈಸೂರು 90, ಕೊಡಗು ಜಿಲ್ಲೆಯಲ್ಲಿ 79 ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.11 ರಷ್ಟಿದ್ದು, ಮರಣ ಪ್ರಮಾಣ ಶೇ. 1.99 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT