ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 636 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಕೋವಿಡ್ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 29,77,225ಕ್ಕೆ ಏರಿದೆ.
ಕೋವಿಡ್‌ನಿಂದ ಇಂದು 4 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,811ಕ್ಕೆ ಏರಿದೆ.
ಇದೇ ಅವಧಿಯಲ್ಲಿ 745 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ರಾಜ್ಯದಲ್ಲಿ 29,27,029 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸದ್ಯ 12356 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಕೋವಿಡ್ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 0.37ರಷ್ಟಿದ್ದು, ಸಾವಿನ ದರ ಶೇಕಡಾ 0.62ರಷ್ಟಿದೆ.
ಬೆಂಗಳೂರು ನಗರದಲ್ಲಿ 245 ಪ್ರಕರಣಗಳು ದೃಢಪಟ್ಟಿದ್ದು, ಒಂದು ಸಾವು ಸಂಭವಿಸಿದೆ. 100 ಪ್ರಕರಣಗಳು ಪತ್ತೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಳಿದಂತೆ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ತಲಾ 44 ಪ್ರಕರಣ ಪತ್ತೆಯಾಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.