ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 1,280 ಹೊಸ ಪ್ರಕರಣ ದೃಢ, 13 ಮಂದಿ ಸಾವು

Last Updated 8 ಡಿಸೆಂಬರ್ 2020, 13:53 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಾದ್ಯಂತ ಕಳೆದ 24 ಗಂಟೆಗಳಲ್ಲಿ 1,280 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 13 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 8,95,284 ಕ್ಕೆ ಏರಿಕೆಯಾಗಿದೆ. ಆ ಪೈಕಿ 11,880 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿದ್ದು, ಇದುವರೆಗೆ 8,58,370 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 25,015 ಸಕ್ರಿಯ ಪ್ರಕರಣಗಳಿದ್ದು, 275 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 638 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 432 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೈಸೂರಿನಲ್ಲಿ 65, ಚಿತ್ರದುರ್ಗ 52, ಚಿಕ್ಕಬಳ್ಳಾಪುರ 50, ಹಾಸನ 49, ಚಿಕ್ಕಮಗಳೂರು 46, ತುಮಕೂರು 46, ಕೋಲಾರ 32, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29 ಹೊಸ ಪ್ರಕರಣಗಳು ದೃಢಪಟ್ಟಿವೆ.

ರಾಜ್ಯದಲ್ಲಿ ಇದುವರೆಗೆ 1,18,78,413 ಕೊರೊನಾ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT