ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 9 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

Last Updated 12 ಡಿಸೆಂಬರ್ 2020, 14:25 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಕೋವಿಡ್‌ ಸೋಂಕಿತರ ಸಂಖ್ಯೆ 9 ಲಕ್ಷ ದಾಟಿದೆ.

ರಾಜ್ಯದಾದ್ಯಂತ 24 ಗಂಟೆಗಳಲ್ಲಿ 1,203 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 11 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 9,00,214ಕ್ಕೆ ಏರಿಕೆಯಾಗಿದೆ. ಆ ಪೈಕಿ 11,939 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿದ್ದು, ಇದುವರೆಗೆ 8,70,002 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 18,254 ಸಕ್ರಿಯ ಪ್ರಕರಣಗಳಿದ್ದು, 244 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 606 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 923 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೈಸೂರಿನಲ್ಲಿ 59, ದಕ್ಷಿಣ ಕನ್ನಡ 53, ಚಿತ್ರದುರ್ಗ 51, ಚಿಕ್ಕಬಳ್ಳಾಪುರ 39, ತುಮಕೂರು 30, ಮಂಡ್ಯ ಜಿಲ್ಲೆಯಲ್ಲಿ 25 ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಇದುವರೆಗೆ 1,22,66,816 ಕೊರೊನಾ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT