ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 6,835 ಹೊಸ ಪ್ರಕರಣ; 120 ಮಂದಿ ಸಾವು

ಅಕ್ಷರ ಗಾತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 6,835 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಕರ್ನಾಟಕದಲ್ಲಿ ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ 27,71,961ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು ಮೃತಪಟ್ಟ 120 ಮಂದಿಯೂ ಸೇರಿದಂತೆ ಈವರೆಗೆ ಒಟ್ಟು 33,033 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸೊಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 01.75 ರಷ್ಟಾಗಿದೆ. ಹೊಸದಾಗಿ 15,409 ಮಂದಿ ಚೇತರಿಸಿಕೊಂಡಿದ್ದು, ಸದ್ಯ 1,72,141 ಪ್ರಕರಣಗಳು ಸಕ್ರಿಯವಾಗಿವೆ.

ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು (1,470) ಪ್ರಕರಣಗಳು ವರದಿಯಾಗಿದ್ದು, 12 ಮಂದಿ ಮೃತಪಟ್ಟಿದ್ದಾರೆ. ಸದ್ಯ 85,044 ಸಕ್ರಿಯ ಪ್ರಕರಣಗಳಿವೆ. ಉಳಿದಂತೆ ಮೈಸೂರು (670), ಹಾಸನ (507), ಬೆಳಗಾವಿ (191), ತುಮಕೂರು (386), ಉಡುಪಿ (122), ಚಿತ್ರದುರ್ಗ (195), ದಕ್ಷಿಣ ಕನ್ನಡ (648) ಶಿವಮೊಗ್ಗ (353) ಮತ್ತು ಚಿಕ್ಕಮಗಳೂರಿನಲ್ಲಿ (185) ಇನ್ನೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT